– ಬಯೋ ಮೆಟ್ರಿಕ್ ಆಧಾರದಲ್ಲಿ ವೇತನ ಪಾವತಿಗೆ ಪ್ಲ್ಯಾನ್
ಬೆಂಗಳೂರು: ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜನೆಗೊಂಡಿರೋ ಸರ್ಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರ ಹಾಜರಾತಿಗೆ ಬಯೋ ಮೆಟ್ರಿಕ್ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಬಯೋ ಮೆಟ್ರಿಕ್ ಆಧಾರದಲ್ಲಿ ಸಂಬಳ ಪಾವತಿ ಮಾಡೋ ವ್ಯವಸ್ಥೆ ಜಾರಿ ಮಾಡೋದಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್ (Sharan Prakash Patil) ತಿಳಿಸಿದರು.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಬಲ್ಕೀಸ್ ಬಾನು ಪ್ರಶ್ನಿಸಿದ ಅವರು, ಜಿಲ್ಲಾಸ್ಪತ್ರೆಗಳಲ್ಲಿ ಸಂಯೋಜನೆಗೊಂಡಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರು ಸರಿಯಾಗಿ ಕೆಲಸಕ್ಕೆ ಹಾಜರಾಗುವುದಿಲ್ಲ. ಸೀನಿಯರ್ ಡಾಕ್ಟರ್‌ಗಳು, ಜ್ಯೂನಿಯರ್ ಡಾಕ್ಟರ್‌ಗಳಿಗೆ ಜವಾಬ್ದಾರಿ ಕೊಟ್ಟು ಅವರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಹೋಗುತ್ತಾರೆ. ಖಾಸಗಿ ಆಸ್ಪತ್ರೆಯಲ್ಲಿ ಡಾಕ್ಟರ್‌ಗಳು ಪ್ರಾಕ್ಟೀಸ್ ಮಾಡ್ತಾರೆ. ನಮ್ಮ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂತಹ ವ್ಯವಸ್ಥೆ ಇದೆ. ಇಂತಹ ವ್ಯವಸ್ಥೆ ಸರಿ ಮಾಡಬೇಕು. ಶಿವಮೊಗ್ಗದಲ್ಲಿ 100 ಬೆಡ್‌ನ ಪ್ರತ್ಯೇಕ ಜಿಲ್ಲಾಸ್ಪತ್ರೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಮಕ್ಕಳಲ್ಲೂ ಕಾಡ್ತಿದೆ ಮಾರಕ ಕ್ಯಾನ್ಸರ್ – ಅಂಕಿ ಅಂಶ ಬಿಚ್ಚಿಟ್ಟ ಶರಣು ಪ್ರಕಾಶ್ ಪಾಟೀಲ್
ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು, ವೈದ್ಯರು ಕಡ್ಡಾಯವಾಗಿ ಆಸ್ಪತ್ರೆಗಳಲ್ಲಿ ಇರಬೇಕು ಎಂದು ಆದೇಶ ಮಾಡಲಾಗಿದೆ. ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೂ ಯಾವುದೇ ಡಾಕ್ಟರ್‌ಗಳು ಪ್ರಾಕ್ಟೀಸ್ ಮಾಡುವ ಹಾಗಿಲ್ಲ ಎಂದೆಲ್ಲಾ ಆದೇಶ ಮಾಡಲಾಗಿದೆ. ಹಾಜರಾತಿಗಾಗಿ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಬಯೋ ಮೆಟ್ರಿಕ್ ಅಳವಡಿಕೆ ಮಾಡಲಾಗಿದೆ. ವೈದ್ಯರು ದಿನಕ್ಕೆ 4 ಬಾರಿ ಬಯೋ ಮೆಟ್ರಿಕ್ ಮಾಡಬೇಕು. ಮುಂದಿನ ದಿನಗಳಲ್ಲಿ ಬಯೋ ಮೆಟ್ರಿಕ್ ಆಧಾರದಲ್ಲಿ ಸಂಬಳ ಬಿಡುಗಡೆ ಮಾಡುವ ವ್ಯವಸ್ಥೆ ಜಾರಿಗೆ ನಿರ್ಧಾರ ಮಾಡಲಾಗಿದೆ ಎಂದರು. ಇದನ್ನೂ ಓದಿ: ರಾಜ್ಯದ 6 ಜಿಲ್ಲೆಗಳಲ್ಲಿ 40ರ ಗಡಿದಾಟಿದ ತಾಪಮಾನ
ಮೆಗ್ಗಾನ್ ಆಸ್ಪತ್ರೆಗಳಲ್ಲಿ ವೈದ್ಯರು ಲೋಪ ಮಾಡಿದರೆ ಅವರ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ. ಶಿವಮೊಗ್ಗದಲ್ಲಿ ಪ್ರತ್ಯೇಕ ಜಿಲ್ಲಾ ಆಸ್ಪತ್ರೆ ಬಗ್ಗೆ ಆರೋಗ್ಯ ಸಚಿವರು ಪರಿಶೀಲನೆ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಹಿಂದೂ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿವಾದದ ಮಾತು