ಬೆಂಗಳೂರು: ಪಕ್ಷೇತರ ಅಭ್ಯರ್ಥಿಯಾಗಿ ಇಂದು ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಬೆಂಬಲಕ್ಕೆ ನಿಂತ ಮಾಜಿ ಸಿಎಂ ಕುಮಾರಸ್ವಾಮಿಗೆ ಧನ್ಯವಾದ ತಿಳಿಸಿದ್ದಾರೆ.
ಹಾಗೆಯೇ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಹಾಗೂ ಅವರ ಕುಟುಂಬಸ್ಥರು ಮನೆ ದೇವರಾದ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಚೆನ್ನಕೇಶವಸ್ಚಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಹೊಸಕೋಟೆ, ಕಾಗವಾಡ, ಗೋಕಾಕ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ!
Advertisement
Advertisement
ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶರತ್ ಬಚ್ಚೇಗೌಡ, ಬಿಜೆಪಿಯ ಯಾವ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸುತ್ತಿದ್ದೇನೆ. ನನಗೆ ಎಲ್ಲಾ ಪಕ್ಷಗಳ ಬೆಂಬಲ ಬೇಕು. ಹೀಗಾಗಿ ಬೆಂಬಲ ಘೋಷಿಸಿದ ಕುಮಾರಣ್ಣನಿಗೆ ಧನ್ಯವಾದಗಳು ಎಂದು ಹೇಳಿದರು.
Advertisement
Advertisement
ಹೋಸಕೋಟೆಯಲ್ಲಿ ಸದ್ಯ ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆ ನಡೆಯುವಂತೆ ಕಾಣುತ್ತಿದೆ. ಒಂದೆಡೆ ಬಿಜೆಪಿಯಿಂದ ಎಂಟಿಬಿ ನಾಗರಾಜ್ ಅವರಿಗೆ ಟಿಕೆಟ್ ನೀಡಲಾಗುತ್ತಿದೆ. ಅವರು ಉಪಚುನಾವಣೆ ಕಣಕ್ಕೆ ಇಳಿಯುತ್ತಾರೆ ಎನ್ನಲಾಗಿದೆ. ಕಾಂಗ್ರೆಸ್‍ನಿಂದ ಸುರೇಶ್ ಅವರ ಪತ್ನಿ ಸ್ಪರ್ಧಿಸುತ್ತಿದ್ದಾರೆ. ನಾನು ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದೇನೆ. ಹೀಗಾಗಿ ನಮ್ಮ ಮೂವರ ಮಧ್ಯೆಯೇ ಸ್ಪರ್ಧೆ ಇರಲಿದೆ ಎಂದರು.
ತಾಲೂಕಿಗೆ ಆದ ದ್ರೋಹಕ್ಕೆ ಜನರು ತೀರ್ಪು ಕೊಡುತ್ತಾರೆ. ತಾಲೂಕಿನ ಮಗ, ಈ ನೆಲದ ಮಣ್ಣಿನ ಮಗನೆಂದು ನನಗೆ ಜನರು ಬೆಂಬಲಿಸುತ್ತಾರೆ ಎಂಬ ನಂಬಿಕೆಯಿದೆ ಎಂದರು. ಈ ವೇಳೆ ಎಂಟಿಬಿ ನಾಗರಾಜ್ ಬಿಜೆಪಿ ಸೇರ್ಪಡೆ ಬಗ್ಗೆ ಪ್ರಶ್ನಿಸಿದ್ದಕ್ಕೆ, ಈ ಬಗ್ಗೆ ಬಿಜೆಪಿ ನಾಯಕರನ್ನು ಪ್ರಶ್ನಿಸಿ, ಇದಕ್ಕೆ ನಾನು ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದು ಪ್ರತಿಕ್ರಿಯಿಸಲು