ನವದೆಹಲಿ: ಸಂಸತ್‌ನಲ್ಲಿ ಮಂಗಳವಾರ ಮಂಡಿಸಲಾದ ಕೇಂದ್ರ ಬಜೆಟ್ ಕುರಿತು ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರತಿಕ್ರಿಯಿಸಿದ್ದಾರೆ.
ನಾವು ಭಯಾನಕ ಹಣದುಬ್ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ಯಾವುದೇ ತೆರಿಗೆ ವಿನಾಯಿತಿ ಇಲ್ಲ. ಈ ಬಜೆಟ್‌ನಲ್ಲಿ ಅಚ್ಛೇ ದಿನ್ ಮರೀಚಿಕೆಯಾಗಿದೆ. ಅಚ್ಛೇ ದಿನ್ ಬರಲು ನಾವು ಇನ್ನೂ 25 ವರ್ಷಗಳವರೆಗೆ ಕಾಯಬೇಕಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: Union Budget: ದುಡಿಯುವ ವರ್ಗದ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಹುಸಿ ಮಾಡಿದೆ: ರಣದೀಪ್ ಸುರ್ಜೇವಾಲಾ ವ್ಯಂಗ್ಯ
ಅತ್ಯಂತ ನಿರಾಶಾದಾಯಕ ಬಜೆಟ್ ಇದಾಗಿದೆ. ಬಜೆಟ್‌ನಲ್ಲಿ ಏನೂ ಇಲ್ಲ. ಮನ್ರೇಗಾ, ರಕ್ಷಣೆ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪೂರಕವಾದ ಯಾವುದೇ ಅಂಶಗಳ ಉಲ್ಲೇಖವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಡಿಜಿಟಲ್ ಕರೆನ್ಸಿಗೆ ಪೂರಕವಾದ ದಿಕ್ಕಿನಲ್ಲಿ ಸರ್ಕಾರ ಸಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ. ಇದು ಸಮಂಜಸ ಎನಿಸಿದರೂ, ಸಾಮಾನ್ಯ ನಾಗರಿಕರ ಅಗತ್ಯತೆಗಳ ಬಗ್ಗೆ ಹೆಚ್ಚಿನ ಕಾಳಜಿಯನ್ನು ಬಜೆಟ್ ತೋರಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಗ್ರಾಮೀಣ, ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕ: ಬಿಎಸ್‌ವೈ ಮೆಚ್ಚುಗೆ