ನವದೆಹಲಿ: ಇಪ್ಪತ್ತು ವರ್ಷಗಳ ಬಳಿಕ ಗಾಂಧಿಯೇತರ ನಾಯಕ ಕಾಂಗ್ರೆಸ್ ಅಧ್ಯಕ್ಷ (Congress President) ಗಾದಿಗೆ ಏರುವ ಗಳಿಗೆ ಹತ್ತಿರ ಬರುತ್ತಿದೆ. ಇದೀಗ ಕಾಂಗ್ರೆಸ್ ಅಧ್ಯಕ್ಷಿಯ ರೇಸ್‍ನಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಮತ್ತು ಸಂಸದ ಶಶಿ ತರೂರ್ (Shashi Tharoor) ಹೆಸರು ಕೇಳಿ ಬರುತ್ತಿದೆ.
2019ರ ಸಾರ್ವತ್ರಿಕ ಚುನಾವಣೆಯ ಸೋಲಿನ ನಂತರ ರಾಹುಲ್ ಗಾಂಧಿ (Rahul Gandhi) ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಪಕ್ಷದ ಸದಸ್ಯರು ಮತ್ತೆ ಅಧ್ಯಕ್ಷರಾಗುವಂತೆ ಒಪ್ಪಿಸಲು ಎಷ್ಟೇ ಪ್ರಯತ್ನಿಸಿದರೂ, ಆ ಎಲ್ಲಾ ಮನವಿಗಳನ್ನು ತಿರಸ್ಕರಿಸಿದ್ದರು. ಇದೀಗ ಅಧ್ಯಕ್ಷರ ರೇಸ್‍ನಲ್ಲಿ ಶಶಿ ತರೂರ್ ಮತ್ತು ಗೆಹ್ಲೋಟ್ ಹೆಸರು ಮುಂಚೂಣಿಯಲ್ಲಿದೆ. ಕೆಲದಿನಗಳ ಹಿಂದೆ ಶಶಿ ತರೂರ್, ಸೋನಿಯಾ ಗಾಂಧಿ (Sonia Gandhi) ಅವರನ್ನು ಭೇಟಿಯಾಗಿ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸುವ ಕುರಿತು ಮಾತುಕತೆ ನಡೆಸಿದ್ದರು. ಇದನ್ನೂ ಓದಿ: ಮೋದಿ ತನಿಖಾ ಸಂಸ್ಥೆಗಳನ್ನು ಛೂ ಬಿಡುವ ಕೆಲಸ ಮಾಡಲ್ಲ: ಮಮತಾ ಮೃದು ಮಾತು
ಪಕ್ಷದೊಳಗೆ ಸಾಂಸ್ಥಿಕ ಸುಧಾರಣೆಗಳನ್ನು ಕೋರಿ 2020ರಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದ 23 ನಾಯಕರ ಗುಂಪಿನಲ್ಲಿ ಶಶಿ ತರೂರ್ ಕೂಡ ಒಬ್ಬರಾಗಿದ್ದರು. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ರಾಹುಲ್ ಗಾಂಧಿ ಅವರೇ ವಹಿಸಿಕೊಳ್ಳಬೇಕು ಎಂದು ರಾಜಸ್ಥಾನ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳು ನಿರ್ಣಯ ಅಂಗೀಕರಿಸಿರುವ ನಡುವೇಯೇ, ಶಶಿ ತರೂರ್ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪಂಜಾಬ್ ಸಿಎಂ ತೂರಾಟ – ವಿಮಾನದಿಂದ ಕೆಳಗಿಳಿಸಿದ Lufthansa?
ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಅಧಿಸೂಚನೆ ಇದೇ 22 ರಂದು ಹೊರಡಿಸಲಾಗಿದ್ದು, ಅ.25 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅಕ್ಟೋಬರ್ 17 ರಂದು ಚುನಾವಣೆ ನಡೆದು, 19 ರಂದು ಫಲಿತಾಂಶ ಹೊರಬೀಳಿದೆ.