ಬೆಳಗಾವಿ: ಸಚಿವೆ ಶಶಿಕಲಾ ಜೊಲ್ಲೆಯವರಿಗೆ ಸೇರಿದ ಕಟ್ಟಡದ ಮೇಲೆ ಎಂಇಎಸ್ ಹಾಗೂ ಶಿವಸೇನಾ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಕರ್ನಾಟಕ ಸರ್ಕಾರದ ಸಚಿವರ ಆಸ್ತಿ-ಪಾಸ್ತಿಗಳ ಮೇಲೆ ಪುಂಡರು ದಾಳಿ ಮಾಡಿದ್ದಾರೆ.
ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸೇರಿದ ಎಲ್ಲಾ ಕಟ್ಟಡ ಕಾಮಗಾರಿಗಳನ್ನು ಶಿವಸೇನಾ ಕಾರ್ಯಕರ್ತರು ಬಂದ್ ಮಾಡಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ಮಹಾನಗರದಲ್ಲಿ ಹಲವಾರು ಕಡೆ ನಡೆಯುತ್ತಿರುವ ಕೊಟ್ಯಂತರ ರೂಪಾಯಿ ಕಟ್ಟಡ ಕಾಮಗಾರಿ ಮೇಲೆ ದಾಳಿ ಮಾಡಿದ್ದಾರೆ.
Advertisement
Advertisement
ಕೊಲ್ಹಾಪುರದಲ್ಲಿ ಶಶಿಕಲಾ ಜೊಲ್ಲೆ ಅವರು ಬಹುಮಹಡಿಯ ಕಟ್ಟಡದ ನಿರ್ಮಾಣವನ್ನು ಮಾಡುತ್ತಿದ್ದಾರೆ. ಸುಮಾರು 50 ಕೋಟಿ ಮೌಲ್ಯದ ಕಟ್ಟಡ ಇದಾಗಿದ್ದು, ನಿರ್ಮಾಣ ಹಂತರದಲ್ಲಿದೆ. ಈ ಕಟ್ಟಡಕ್ಕೆ ನುಗ್ಗಿದ ಎಂಇಎಸ್ ಹಾಗೂ ಶಿವಸೇನಾ ಕಾರ್ಯಕರ್ತರು ಗೂಂಡಾಗಿರಿ ನಡೆಸಿದ್ದಾರೆ. ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ವಸ್ತುಗಳನ್ನು ಹಾನಿಗೊಳಿಸಿದ್ದಾರೆ.
Advertisement
Advertisement
ಈ ವಿಚಾರವಾಗಿ ಮಾತನಾಡಿದ ಶಶಿಕಲಾ ಜೊಲ್ಲೆ, ಕಟ್ಟಡ ಕಾಮಗಾರಿ ಪುನರ್ ಆರಂಭಿಸಲು ಶಿವಸೇನೆಗೆ ಅಂಗಲಾಚಿದ್ದಾರೆ. ಅಲ್ಲದೆ ಕಟ್ಟಡ ನಿರ್ಮಾಣಕ್ಕೆ ಯಾವುದೇ ತೊಂದರೆಯನ್ನು ಕೋಡಬೇಡಿ ಎಂದು ಮನವಿ ಮಾಡಿದ್ದಾರೆ.