ಚಿಕ್ಕೋಡಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ (Congress Guarantee Scheme) ಸಂಪೂರ್ಣ ವಿಫಲವಾಗಿದ್ದು, ಬಹಳಷ್ಟು ಮಹಿಳೆಯರಿಗೆ ಇನ್ನೂ ಗೃಹಲಕ್ಷ್ಮಿಯ 2,000 ರೂ. ಹಣ ಸಿಕ್ಕೇ ಇಲ್ಲ ಎಂದು ಮಾಜಿ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ವಾಗ್ದಾಳಿ ನಡೆಸಿದ್ದಾರೆ.
Advertisement
ಚಿಕ್ಕೋಡಿ ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಹಳಷ್ಟು ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ನನಗೂ ಫ್ರೀ ನಿನಗೂ ಫ್ರೀ ಅಂತ ಹೇಳಿ 5 ಗ್ಯಾರಂಟಿ ಜಾರಿ ಮಾಡಿದೆ. ಆದ್ರೆ ಇನ್ನೂ ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬಂದಿಲ್ಲ. ಸರ್ಕಾರ ಹೇಳಿದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Advertisement
Advertisement
ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಯಂತೆ 100% ಯೋಜನೆಯನ್ನು ಅನುಷ್ಠಾನಗೊಳಿಸಿದಾಗ ಮಾತ್ರ ಜನರಿಗೆ ನ್ಯಾಯ ಕೊಟ್ಟಂತೆ ಆಗುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Bigg Boss Kannada : ಸ್ನೇಕ್ ಶ್ಯಾಮ್, ನಮ್ರತಾ ಗೌಡ, ಇಶಾನಿ ಕನ್ಫರ್ಮ್
Advertisement
ಇದೇ ವೇಳೆ ಶಾಸಕರಿಗೆ ಅನುದಾನ ಬರ್ತಿಲ್ಲ ಎಂಬ ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಕೆಗೆ ಪ್ರತಿಕ್ರಿಯಿಸಿ, ಗ್ಯಾರಂಟಿಯಿಂದ ಆಗಿರುವ ಅನಾನುಕೂಲದ ಬಗ್ಗೆ ಅವರ ಪಕ್ಷದ ಶಾಸಕರೇ ಹೇಳಿದ್ದಾರೆ. ಇದರಿಂದ ಪಕ್ಷದ ಶಾಸಕರಲ್ಲೇ ಅಸಮಾಧಾನ ಇರುವುದು ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಹತ್ಯೆ, ಮೋದಿ ಸ್ಟೇಡಿಯಂ ಸ್ಫೋಟ ಬೆದರಿಕೆ – ಮುಂಬೈ ಪೊಲೀಸರಿಗೆ ಸಂದೇಶ
ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗುತ್ತಿದೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಶಶಿಕಲಾ ಜೊಲ್ಲೆ, ಅನುಭವಿ ನಾಯಕರು ಸತ್ಯ ಸಂಗತಿಗಳ ಬಗ್ಗೆ ಹೇಳಿದ್ದಾರೆ. ಕಾಂಗ್ರೆಸ್ ಯಾವ ರೀತಿ ರಾಜಕಾರಣ ಮಾಡುತ್ತಿದೆ ಅನ್ನೋದು ಇಡೀ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
Web Stories