ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಉತ್ತಮ ಪ್ರದರ್ಶನ ತೋರಿದ್ದರೂ, ಮುಂಬರುವ ಏಕದಿನ ಕ್ರಿಕೆಟ್ ಟೂರ್ನಿಯಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಕುರಿತು ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಸ್ಪಷ್ಟನೆ ನೀಡಿದ್ದಾರೆ.
ರಿಷಬ್ ಪಂತ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು, ಪಂದ್ಯದ ಅಂತ್ಯದವರೆಗೂ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ತಂದು ಕೊಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಟೀಂ ಇಂಡಿಯಾ ‘ಎ’ ತಂಡದಲ್ಲಿ ಅವಕಾಶ ನೀಡಿ ಮುಂದಿನ ಪಂದ್ಯಗಳಲ್ಲಿ ಉತ್ತಮ ಫಿನಿಶಿಂಗ್ ನೀಡುವ ಬಗ್ಗೆ ಕಲಿಯಲು ಸಲಹೆ ನೀಡಲಾಗಿದೆ ಎಂದು ರವಿಶಾಸ್ತ್ರಿ ತಿಳಿಸಿದ್ದಾರೆ.
Advertisement
Advertisement
ಕಳೆದ ಜೂನ್ ತಿಂಗಳಿನಿಂದ ಪಂತ್ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದು ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ಆದ್ದರಿಂದಲೇ ಅವರಿಗೆ ಕೆಲ ಸಮಯ ವಿಶ್ರಾಂತಿಯನ್ನು ನೀಡಲಾಗಿದೆ. ಸೂಕ್ತ ಸಮಯದಲ್ಲಿ ಪಂತ್ ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ರವಿಶಾಸ್ತ್ರಿ ಸ್ಪಷ್ಟನೆ ನೀಡಿದ್ದಾರೆ.
Advertisement
ಟೀಂ ಇಂಡಿಯಾ ಏಕದಿನ ಸರಣಿಗೆ ದಿನೇಶ್ ಕಾರ್ತಿಕ್ ಕಮ್‍ಬ್ಯಾಕ್ ಮಾಡಿದ್ದು, ಆಸೀಸ್ ವಿರುದ್ಧದ ಟಿ20 ಸರಣಿಯಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಿ ಉತ್ತಮ ಪ್ರದರ್ಶನ ನೀಡಿದ್ದೇ ದಿನೇಶ್ ಆಯ್ಕೆಗೆ ಕಾರಣ ಎನ್ನಲಾಗಿದೆ. ಆಸೀಸ್ ಟೆಸ್ಟ್ ಸರಣಿಗೆ ಆಯ್ಕೆ ಆಗಿದ್ದ ಪಂತ್ ಅಕ್ರಮಣಕಾರಿ ಬ್ಯಾಟಿಂಗ್ ನಡೆಸಿದ್ದರು. ಅಲ್ಲದೇ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು. ಅಲ್ಲದೇ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಕೂಡ ಪಂತ್ ಪರ ಬ್ಯಾಟ್ ಬೀಸಿದ್ದರು.
Advertisement
It was a very interesting chat with the Head Coach @RaviShastriOfc and the Bowling coach Bharat Arun. Now that mission Australia has been accomplished how will India approach the world cup. Listen to the full conversation on @IndiaToday tonight at 630pm. pic.twitter.com/QouZZD3OYu
— Boria Majumdar (@BoriaMajumdar) January 8, 2019
'Absolutely no doubt' that Rishabh Pant is in contention for a @cricketworldcup spot, says India's chief selector MSK Prasad.
➡️ https://t.co/stZCBu3wkQ pic.twitter.com/RuIVXGWvSJ
— ICC (@ICC) January 8, 2019
Update: Jasprit Bumrah has been rested for the upcoming ODI series against Australia and India's Tour of New Zealand. Mohammed Siraj to replace him. @sidkaul22 added to India's T20I squad. #TeamIndia
Details: https://t.co/tc4yndy40I pic.twitter.com/92E0hpuF5a
— BCCI (@BCCI) January 8, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv