LatestMain PostNational

ಸುಪ್ರಿಯಾ ಮೆಲು ಧ್ವನಿಯಲ್ಲಿ ಮಾತನಾಡುತ್ತಿದ್ದರು, ಕೇಳಿಸಿಕೊಳ್ಳಲು ನಾನು ಡೆಸ್ಕ್ ಮೇಲೆ ಒರಗಿದೆ

ಕಾಂಗ್ರೆಸ್ ಸಂಸದ ಶಶಿತರೂರ್ ಪ್ರತಿಕ್ರಿಯೆ

Advertisements

ನವದೆಹಲಿ: ಸಂಸತ್ತಿನಲ್ಲಿ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರೊಂದಿಗಿನ ಇತ್ತೀಚಿನ ಸಂಭಾಷಣೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರತಿಕ್ರಿಯಿಸಿದ್ದಾರೆ.

ಲೋಕಸಭೆ ಕಲಾಪದ ವೇಳೆ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಎದ್ದು ನಿಂತು, ಸದನವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಆದರೆ, ಅವರ ಹಿಂದೆ ಕುಳಿತಿದ್ದ ಶಶಿ ತರೂರ್, ಸಂಸದೆ ಸುಪ್ರಿಯಾ ಸುಳೆ ಅವರೊಂದಿಗೆ ಮಾತುಕತೆಯಲ್ಲಿ ಮಗ್ನರಾಗಿದ್ದರು. ಇದನ್ನು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದರು.

ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ತರೂರ್, ವೀಡಿಯೋ ನೋಡಿ ಆಂದಿಸುತ್ತಿರುವ ಎಲ್ಲರಿಗೂ ಸ್ಪಷ್ಟನೆ ನೀಡಲು ಬಯಸುತ್ತೇನೆ. ಲೋಕಸಭೆಯಲ್ಲಿ ಫಾರೂಕ್ ಅಬ್ದುಲ್ಲಾ ಮಾತುಕತೆ ಮುಗಿದ ಬಳಿಕ ಸುಪ್ರಿಯಾ ಮಾತನಾಡಲಿದ್ದರು. ಅದಕ್ಕಾಗಿ ಸುಪ್ರಿಯಾ, ನನ್ನ ಬಳಿ ಪ್ರಶ್ನೆಯೊಂದನ್ನು ಕೇಳುತ್ತಿದ್ದರು. ಫಾರೂಕ್ ಅವರಿಗೆ ತೊಂದರೆಯಾಗದಂತೆ ಸುಪ್ರಿಯಾ ಮೃದುವಾಗಿ ಮಾತನಾಡುತ್ತಿದ್ದರು. ಅವರ ಮಾತುಗಳನ್ನು ಕೇಳಿಸಿಕೊಳ್ಳಲು ನಾನು ಡೆಸ್ಕ್ ಮೇಲೆ ಒರಗಿದೆ ಅಷ್ಟೇ’ ಎಂದು ಹೇಳಿಕೊಂಡಿದ್ದಾರೆ.

Leave a Reply

Your email address will not be published.

Back to top button