ಬೀದರ್: ಹಿರಿಯ ನಟಿ ಲೀಲಾವತಿ (Leelavati) ಮೇರು ನಟಿಯಾಗಿ, ಶ್ರೇಷ್ಠ ನಟಿಯಾಗಿ ಜನತೆಯ ಮನ ಗೆದ್ದಿದ್ದರು. ಬಹಳ ಚಿತ್ರಗಳಲ್ಲಿ ನಟಿಸಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದರು. ಅವರ ಸಾವಿನಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅವರ ಕುಟುಂಬಕ್ಕೆ ಅಗಲುವಿಕೆಯನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಈಶ್ವರ್ ಖಂಡ್ರೆ (Eshwar Khandre) ಸಂತಾಪ ಸೂಚಿಸಿದ್ದಾರೆ.
ಇನ್ನು ಕಾರಂಜಾ ಸಂತ್ರಸ್ತರಿಂದ ಜನಪ್ರತಿನಿಧಿಗಳ ಮನೆಮುಂದೆ ಹೋರಾಟ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಂತ್ರಸ್ತರು ಸುಮಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದು, ಪಕ್ಷಾತೀತವಾಗಿ ಜನಪ್ರತಿನಿಧಿಗಳು ಸಂತ್ರಸ್ತರ ಪರವಾಗಿದ್ದೇವೆ ಎಂದರು. ಇದನ್ನೂ ಓದಿ: ಮಠಾಧೀಶರು, ಪಾದ್ರಿ, ಮೌಲ್ವಿಗಳು ರಾಜಕಾರಣ ಮಾಡಬಾರದು: ನಿಜಗುಣಾನಂದ ಶ್ರೀ
Advertisement
Advertisement
ಕಾರಂಜಾ ಸಂತ್ರಸ್ತರ ಸಮಸ್ಯೆಯನ್ನು ಸರ್ಕಾರ ವಿಶೇಷ ಪ್ರಕರಣವಾಗಿ ಪರಿಗಣಿಸಬೇಕಾಗಿದ್ದು, ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇವೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಪಕ್ಷಾತೀತವಾಗಿ ಎಲ್ಲರೂ ಪ್ರಯತ್ನ ಮಾಡಿದ್ದು ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಯತ್ನಾಳ್‍ರಿಂದ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ: ಎಂ.ಬಿ ಪಾಟೀಲ್
Advertisement