– ಚನ್ನಪಟ್ಟಣದ ಮನೆ ಮಗನನ್ನ ಗೆಲ್ಲಿಸಿದ್ದಾರೆ ಎಂದ ಶೀಲಾ ಯೋಗೇಶ್ವರ್
ಮಂಡ್ಯ: ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಿ.ಪಿ ಯೋಗೇಶ್ವರ್ (CP Yogeshwar) ಪತ್ನಿ ಅವರಿಂದು ಮದ್ದೂರಿನ ಹೊಳೆ ಆಂಜನೇಯ ದೇಗುಲಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
Advertisement
ಚುನಾವಣೆ ಪೂರ್ವದಲ್ಲೇ ದೇಗುಲಕ್ಕೆ ಭೇಟಿ ನೀಡಿದ್ದ ಕುಟುಂಬ ಸಿಪಿವೈ ಗೆಲುವಿಗಾಗಿ ಹರಕೆ ಕಟ್ಟಿಕೊಂಡಿತ್ತು. ಅದರಂತೆ ದೇವಸ್ಥಾನಕ್ಕೆ ಬಂದು ಹೊಳೆ ಆಂಜನೇಯನಿಗೆ ಒಂದೂಕಾಲು ರೂಪಾಯಿ ಕಟ್ಟಿ ಹರಕೆ ತೀರಿಸಿದ್ದಾರೆ. ಬಳಿಕ ದೀಪ ಹಚ್ಚಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಸಿಪಿವೈ ಪತ್ನಿ ಶೀಲಾಗೆ (Sheela Yogeshwar) ಶಾಸಕ ಉದಯ್ ಪತ್ನಿ ವಿನೂತ್ ಸಾಥ್ ನೀಡಿದ್ದಾರೆ.
Advertisement
ಈ ವೇಳೆ ಮಾತನಾಡಿದ ಅವರು, ಕಷ್ಟದ ಸಂದರ್ಭದಲ್ಲಿ ಮಾತೃ ಪಕ್ಷ ಕೈಹಿಡಿಯಿತು. ಚನ್ನಪಟ್ಟಣ ಜನರ ಆಶಿರ್ವಾದದಿಂದ ಯೋಗೇಶ್ವರ್ ಗೆದ್ದಿದ್ದಾರೆ. ನನ್ನ ಪತಿಯ ಜನ್ಮ ಭೂಮಿ ಹಾಗೂ ಕರ್ಮ ಭೂಮಿ ಚನ್ನಪಟ್ಟಣ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ಬೊಂಬೆನಗರಿಯಲ್ಲಿ ಯೋಗೇಶ್ವರ್ ಮ್ಯಾಜಿಕ್ ಹೇಗಾಯ್ತು? ಹಿಂದೆ ಯಾವ ಪಕ್ಷದಿಂದ ಯಾವಾಗ ಗೆದ್ದಿದ್ದರು?
Advertisement
Advertisement
ನಾವು ಸಾಮಾನ್ಯ ಕುಟುಂಬದಿಂದ ಬಂದವ್ರು. ಪತಿಯ ಜನಸೇವೆ ಗುರುತಿಸಿ ಜನ ಕೈ ಹಿಡಿದಿದ್ದಾರೆ. ಎರಡು ಸರಿ ಸೋಲು ಅನುಭವಿಸಿದ್ವಿ ಈ ಬಾರಿ ಭರವಸೆ ಇತ್ತು. ಚನ್ನಪಟ್ಟಣದ ಜನ ತಮ್ಮ ಮನೆ ಮಗನನ್ನ ಗೆಲ್ಲಿಸಿದ್ದಾರೆ. ನಮ್ಮದೇ ಸರ್ಕಾರ ಇರೋದ್ರಿಂದ ಜನ ಸೇವೆ ಮಾಡಬಹುದು. ಸಾಕಷ್ಟು ಅಭಿವೃದ್ಧಿ ಬಗ್ಗೆ ಜನರ ನಿರೀಕ್ಷೆ ಇದೆ. ಇದನ್ನೂ ಓದಿ: ಯುಪಿಯ ಕುಂದರ್ಕಿಯಲ್ಲಿ 11 ಮುಸ್ಲಿಮರನ್ನು ಸೋಲಿಸಿದ ಏಕೈಕ ಹಿಂದೂ ಅಭ್ಯರ್ಥಿ
ಇಂದು ಆರ್.ಅಶೋಕ್ ಮಂಡ್ಯ ಪ್ರವಾಸ:
ವಿಪಕ್ಷ ನಾಯಕ ಆರ್. ಅಶೋಕ್ ಇಂದು (ನ.24) ಮಂಡ್ಯ ಕೈಗೊಂಡಿದ್ದಾರೆ. ಬೆಳಗ್ಗೆ 11 ಗಂಟೆ ವೇಳೆಗೆ ಶ್ರೀರಂಗಪಟ್ಟಣ ವಿಧಾನಸಭಾ ಕೇತ್ರದ ತಗ್ಗಹಳ್ಳಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಹ ಪಾಲ್ಗೊಳ್ಳಲಿದ್ದಾರೆ.
ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ನೂರಕ್ಕು ಹೆಚ್ಚು ಬೇರೆ ಬೇರೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ | ವಿಜಯೋತ್ಸವದ ವೇಳೆ ಅಗ್ನಿ ಅವಘಡ – ನೂತನ ಶಾಸಕನಿಗೆ ಗಾಯ