ದಕ್ಷಿಣ ಸುಡಾನ್ (ಆಫ್ರಿಕಾ): ವಿಲಕ್ಷಣ ಪ್ರಕರಣವೊಂದರಲ್ಲಿ, ದಕ್ಷಿಣ ಸುಡಾನ್‌ನಲ್ಲಿ ಟಗರೊಂದು ಮಹಿಳೆಯನ್ನು ಕೊಂದ ಆರೋಪ ಸಾಬೀತಾದ ನಂತರ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ದಕ್ಷಿಣ ಸುಡಾನ್‌ನಲ್ಲಿ 45 ವರ್ಷದ ಅಧಿಯು ಚಾಪಿಂಗ್ ಎಂಬವರ ಮೇಲೆ ಟಗರು ದಾಳಿ ನಡೆಸಿದೆ. ʼರಾಮ್ʼ ಹೆಸರಿನ ಟಗರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು. ಟಗರು, ಚಾಪಿಂಗ್ ಅವರಿಗೆ ಗುದ್ದಿ ಗಂಭೀರವಾಗಿ ಗಾಯಗೊಳಿಸಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಉತ್ತರ ಕೊರಿಯಾದಲ್ಲಿ ನಿಯಂತ್ರಣಕ್ಕೆ ಬಂದ ಕೊರೊನಾ
Advertisement
ರುಂಬೆಕ್ ಪೂರ್ವದಲ್ಲಿನ ಅಕುಯೆಲ್ ಯೋಲ್ ಎಂಬ ಸ್ಥಳದಲ್ಲಿ ಈ ಘಟನೆ ನಡೆದಿದೆ. ಮಾಲೆಂಗ್ ಆಗೋಕ್ ಪಾಯಂನ ಪೊಲೀಸ್ ಠಾಣೆಯಲ್ಲಿ ಟಗರನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಮಾಲೀಕ ನಿರಪರಾಧಿ. ಆದರೆ ಟಗರು ʼರಾಮ್ʼ ಅಪರಾಧವನ್ನು ಎಸಗಿದ ಕಾರಣ ಅದನ್ನು ಬಂಧಿಸಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
ಮುಂದಿನ ಮೂರು ವರ್ಷಗಳ ಕಾಲ ಸುಡಾನ್‌ನ ಲೇಕ್ಸ್ ಸ್ಟೇಟ್‌ನಲ್ಲಿರುವ ಅಡ್ಯುಯೆಲ್ ಕೌಂಟಿಯ ಪ್ರಧಾನ ಕಚೇರಿಯ ಮಿಲಿಟರಿ ಶಿಬಿರದಲ್ಲಿ ಟಗರು ಸೆರೆವಾಸ ಕಳೆಯಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಟಗರಿನ ಮಾಲೀಕ ಡುಯೋನಿ ಮಾನ್ಯಂಗ್ ಧಾಲ್, ಸಂತ್ರಸ್ತೆ ಕುಟುಂಬಕ್ಕೆ ತಮ್ಮ ಐದು ಹಸುಗಳನ್ನು ಪರಿಹಾರವಾಗಿ ನೀಡಬೇಕು ಎಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿದೆ. ಇದನ್ನೂ ಓದಿ: ಲುಲು ಗ್ರೂಪ್‍ನೊಂದಿಗೆ 2,000 ಕೋಟಿ ರೂ. ಹೂಡಿಕೆ ಒಪ್ಪಂದ – ಪ್ರತಿಷ್ಠಿತ ಕಂಪನಿಗಳೊಂದಿಗೆ ಬೊಮ್ಮಾಯಿ ಚರ್ಚೆ
ಅಮೆರಿಕದಲ್ಲೂ ನಡೆದಿತ್ತು ದಾಳಿ
ಕುರಿ, ಟಗರು ದಾಳಿಯಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ, ಅಮೆರಿಕಾದಲ್ಲಿ ಮಹಿಳೆಯೊಬ್ಬರು ಕೂಡ ಜಮೀನಿನಲ್ಲಿ ಕುರಿಗಳ ದಾಳಿಯಿಂದ ಸಾವನ್ನಪ್ಪಿದ್ದರು. 73 ವರ್ಷದ ಕಿಮ್ ಟೇಲರ್ ಮಸಾಚುಸೆಟ್ಸ್‌ನ ಬೋಲ್ಟನ್‌ನಲ್ಲಿರುವ ಕಲ್ಟಿವೇಟ್ ಕೇರ್ ಫಾರ್ಮ್‌ನಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡುತ್ತಿದ್ದಾಗ, ಅವರು ಸಾಕುಪ್ರಾಣಿ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ವೇಳೆ ಹೃದಯ ಸ್ತಂಭನಕ್ಕೆ ಒಳಗಾಗಿ ಮೃತಪಟ್ಟಿದ್ದರು. ಇದನ್ನೂ ಓದಿ: ಆಸ್ಟ್ರೇಲಿಯಾ ನೂತನ ಪ್ರಧಾನಿಯಾಗಿ ಅಂಥೋನಿ ಎಲ್ಬನೀಸ್ ಅಧಿಕಾರಕ್ಕೆ