ಧಾರವಾಡ: ಇಡೀ ದೇಶವೇ ಕಾತುರದಿಂದ ಕಾಯುತ್ತಿರುವ ದಿನ ಜನವರಿ 22. ಏಕೆಂದರೆ ಆ ದಿನ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರ ಅಯೋಧ್ಯೆಯಲ್ಲಿ ತಲೆ ಎತ್ತಿ ನಿಲ್ಲಲಿದ್ದಾನೆ. ಆ ದಿನವನ್ನು ಕಣ್ತುಂಬಿಸಿಕೊಳ್ಳಲು ಇಡೀ ದೇಶವೇ ತುದಿಗಾಲ ಮೇಲೆ ನಿಂತಿದೆ. ಈಗಾಗಲೇ ಪ್ರಭು ಶ್ರೀರಾಮಚಂದ್ರನ ಪ್ರಾಣಪ್ರತಿಷ್ಠಾಪನೆಗಾಗಿ ದೇಶದ ಮೂಲೆ ಮೂಲೆಗಳಿಂದ ಬಗೆ ಬಗೆ ವಸ್ತುಗಳು ಹೋಗುತ್ತಿವೆ. ಇದಕ್ಕೆ ನಮ್ಮ ಹೆಮ್ಮೆಯ ಧಾರವಾಡ ಕೂಡ ಹೊರತಾಗಿಲ್ಲ.
Advertisement
ವಿದ್ಯಾಕಾಶಿ ಧಾರವಾಡ ವಿಶಿಷ್ಟತೆಗಳಲ್ಲಿ ವಿಶಿಷ್ಟತೆ ಹೊಂದಿದ ಜಿಲ್ಲೆ. ಈ ಜಿಲ್ಲೆಯಿಂದ ಇದೀಗ ಮರ್ಯಾದಾ ಪುರುಷೋತ್ತಮನಿಗೆ ಕಂಬಳಿಗಳು ಹೋಗುತ್ತಿವೆ. ರೈತರು ಈ ಕಂಬಳಿಗಳನ್ನು ದೇವರ ಸ್ವರೂಪದಲ್ಲಿ ಕಾಣುತ್ತಾರೆ. ಶುಭ ಕಾರ್ಯಗಳಿಗೆ ಈ ಕಂಬಳಿಗಳು ಬೇಕೇ ಬೇಕು. ಇದನ್ನೂ ಓದಿ: ಹಿಂದೂಗಳು ದರ್ಬಲಗೊಂಡರೆ ಮತ್ತೊಂದು ಪಾಕ್ ಸೃಷ್ಟಿ: ಯತೀಂದ್ರ ಹೇಳಿಕೆಗೆ ಸಿ.ಟಿ ರವಿ ತಿರುಗೇಟು
Advertisement
Advertisement
ಇದೀಗ ಧಾರವಾಡದಲ್ಲಿ ಶ್ರೀರಾಮ ಚಂದ್ರನಿಗಾಗಿಯೇ ವಿಶೇಷವಾಗಿ ತಯಾರಿಸಲಾದ ಕಂಬಳಿಗಳು ಅಯೋಧ್ಯೆಗೆ ಹೊರಟಿವೆ. ಧಾರವಾಡದ ರೈತರ ಓಣಿ ಎಂದೇ ಕರೆಯಲಾಗುವ ಕಮಲಾಪುರ ಬಡಾವಣೆಯ ಸುಭಾಷ ರಾಯಣ್ಣವರ ಅವರು ಮೂರು ತಲೆಮಾರುಗಳಿಂದ ಕಂಬಳಿ ಕಟ್ಟುತ್ತಾ ಬಂದಿದ್ದಾರೆ. ಇದೀಗ ಸುಭಾಷ್ ಅವರು ಅಯೋಧ್ಯೆಗೆ ಕಳುಹಿಸಲೆಂದೇ ಎರಡು ಕಂಬಳಿಗಳನ್ನು ಕಟ್ಟಿದ್ದಾರೆ. ಅಲ್ಲದೇ ಅವುಗಳನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೂಲಕ ಅಯೋಧ್ಯೆಗೆ ಕಳುಹಿಸುವ ವ್ಯವಸ್ಥೆ ಕೂಡ ಮಾಡಿಕೊಂಡಿದ್ದಾರೆ.
Advertisement
ಈ ಕಂಬಳಿಗಳು 4 ಅಡಿ ಅಗಲ 10 ಅಡಿ ಉದ್ದ ಇವೆ. ಒಟ್ಟು 14 ಉಂಡೆ ಕುರಿ ಉಣ್ಣೆಯಿಂದ ಇವುಗಳನ್ನು ಸಿದ್ಧಪಡಿಸಲಾಗಿದ್ದು, ಇವುಗಳನ್ನು ಅಯೋಧ್ಯೆ ಕಳುಹಿಸಿಕೊಡಲಾಗುವುದು ಎಂಬ ಭರವಸೆ ಸಿಕ್ಕ ಮೇಲೆಯೇ ಸುಭಾಷ ಅವರು ಈ ಕಂಬಳಿಗಳಿಗೆ ಕರಿ ಕಟ್ಟಿದ್ದಾರೆ. ಯಾವ ಹೆಸರಿನ ಮೇಲೆ ಕರಿ ಕಟ್ಟುತ್ತಾರೋ ಆ ಕಂಬಳಿಗಳು ಅದೇ ಕೆಲಸಕ್ಕೆ ಬಳಕೆಯಾಗಬೇಕು ಎಂಬ ಪ್ರತೀತಿ ಇದೆ. ಪ್ರಹ್ಲಾದ್ ಜೋಶಿ ಕೂಡ ಈಗ ಆ ಕಂಬಳಿಗಳನ್ನು ಅಯೋಧ್ಯೆಗೆ ತೆಗೆದುಕೊಂಡು ಹೋಗಲಿದ್ದಾರೆ.
ಧಾರವಾಡದಿಂದ ಅಯೋಧ್ಯೆ ಕಂಬಳಿಗಳು ಪೂಜೆಗಾಗಿ ಹೊರಟಿದ್ದು, ಧಾರವಾಡದ ಹಿರಿಮೆ ಹೆಚ್ಚಿಸಿವೆ. ರಾಮನ ಮೇಲೆ ಅಪಾರ ಭಕ್ತಿ ಇಟ್ಟುಕೊಂಡು ಸುಭಾಷ್ ರಾಯಣ್ಣವರ ಎಂಬವರು ಈ ಕಂಬಳಿಗಳನ್ನು ಸಿದ್ಧಪಡಿಸಿಕೊಟ್ಟಿದ್ದು, ಅವರ ಕನಸು ನನಸಾದಂತಾಗಿದೆ.