ಕರ್ನಾಟಕದ (Karnataka) ಅನುಭವಿ ರಾಜಕಾರಣಿ ಸಿದ್ದರಾಮಯ್ಯ (Siddaramaiah). ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಸಿದ್ದರಾಮಯ್ಯ ಅವರು ಎಸ್.ನಿಜಲಿಂಗಪ್ಪ ಹಾಗೂ ಡಿ. ದೇವರಾಜ ಅರಸ್ ನಂತರ ಪೂರ್ಣಾವಧಿ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂದು ಹೆಸರಾಗಿದ್ದರು. 34 ವರ್ಷಗಳ ಚುನಾವಣೆ ಇತಿಹಾಸದಲ್ಲಿ ಕಾಂಗ್ರೆಸ್‌ನ ಅಭೂತಪೂರ್ವ ಸಾಧನೆಯೊಂದಿಗೆ ಈಗ ಮತ್ತೆ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಸಿದ್ದರಾಮಯ್ಯ ಅವರ ಜೀವನಗಾಥೆ, ಬಾಲ್ಯ, ವಿದ್ಯಾಭ್ಯಾಸ, ರಾಜಕೀಯ ಜೀವನ ಕುತೂಹಲಕಾರಿ. ಹಳ್ಳಿಗಾಡಿನ ಜೀವನ, ವಕೀಲಿಕೆಯಿಂದ ಮುಖ್ಯಮಂತ್ರಿ ಗಾದಿವರೆಗೆ ಸಿದ್ದರಾಮಯ್ಯ ಸಾಗಿಬಂದ ಹಾದಿ ರೋಚಕವಾಗಿದೆ. ಇದನ್ನೂ ಓದಿ: ನಮ್ಮಲ್ಲಿ ಯಾವುದೇ ಬಣ ಇಲ್ಲ, ಹಿರಿತನ ನೋಡಿ ಹಂಚಿಕೆ: ಎಂಬಿ ಪಾಟೀಲ್
Advertisement
Advertisement
10 ವರ್ಷದ ವರೆಗೆ ಶಾಲೆ ಸೇರಿರಲಿಲ್ಲ ಸಿದ್ದು
ಮೈಸೂರಿನ ವರುಣಾ ಹೋಬಳಿಯ ಸಿದ್ದರಾಮನಹುಂಡಿಯಲ್ಲಿ 1948ರ ಆಗಸ್ಟ್ 12 ರಂದು ಸಿದ್ದರಾಮಯ್ಯ ಜನಿಸಿದರು. ಇವರ ತಂದೆ ಸಿದ್ಧರಾಮೇಗೌಡ, ತಾಯಿ-ಬೋರಮ್ಮ. ಇವರದು ತುಂಬು ಮನೆಯ ಅವಿಭಕ್ತ ಕುಟುಂಬ. 6 ಜನ ಮಕ್ಕಳಲ್ಲಿ ಸಿದ್ದರಾಮಯ್ಯ ಅವರು ನಾಲ್ಕನೇಯವರು. ಚಿಕ್ಕಂದಿನಲ್ಲೇ ಜಾನಪದ ನೃತ್ಯ ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ ನೃತ್ಯಗಳನ್ನು ಕಲಿತವರು ಸಿದ್ದರಾಮಯ್ಯ. ಹತ್ತನೇ ವರ್ಷದವರೆಗೆ ಇವರು ಶಾಲೆಗೇ ಹೋಗಿರಲಿಲ್ಲ. ನೇರವಾಗಿ ಐದನೇ ತರಗತಿಗೆ ಶಾಲೆಗೆ ಪ್ರವೇಶ ಪಡೆದು ವಿದ್ಯಾಭ್ಯಾಸ ಮುಂದುವರೆಸಿದರು.
Advertisement
ವಿದ್ಯಾಭ್ಯಾಸ ಮತ್ತು ವಕೀಲಿಕೆ
ಪ್ರಾಥಮಿಕ, ಮಾಧ್ಯಮಿಕ, ಪ್ರೌಢಶಾಲೆ ವಿದ್ಯಾಭ್ಯಾಸವನ್ನು ತಮ್ಮ ಹುಟ್ಟೂರಿನಲ್ಲೇ ಮುಗಿಸಿದರು. ಪಿಯುಸಿಯನ್ನು ಮೈಸೂರಿನಲ್ಲಿ, ಬಿ.ಎಸ್ಸಿ ಪದವಿಯನ್ನು ಯುವರಾಜ ಕಾಲೇಜಿನಲ್ಲಿ ಓದಿದರು. ನಂತರ ಮೈಸೂರು ವಿವಿಯಿಂದ ಕಾನೂನು ಪದವಿ ಪಡೆದರು. ಚಿಕ್ಕಬೋರಯ್ಯ ಎಂಬ ವಕೀಲರ ಬಳಿ ಜೂನಿಯರ್ ಆಗಿ ಕೆಲಸ ಮಾಡಿದರು. ನಂತರ 1978 ರವರೆಗೆ ಸ್ವಂತ ವಕೀಲಿ ವೃತ್ತಿ ನಡೆಸಿದರು. ಇದನ್ನೂ ಓದಿ: ಪ್ರಮಾಣವಚನ ಕಾರ್ಯಕ್ರಮಕ್ಕೆ ಬರಲಿದ್ದಾರೆ ಬಿಜೆಪಿಯೇತರ ನಾಯಕರು
Advertisement
ರಾಜಕೀಯ ಜೀವನ
ವಕೀಲ ವೃತ್ತಿ ಮಾಡುತ್ತಿದ್ದ ಸಿದ್ದರಾಮಯ್ಯ ಅವರು ರೈತ ಚಳವಳಿ ನೇತಾರ ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರ ಸಹಾಯದಿಂದ ರಾಜಕೀಯ ಪ್ರವೇಶ ಮಾಡಿದರು. 1978 ರಲ್ಲಿ ತಾಲೂಕು ಬೋರ್ಡ್ ಮೆಂಬರ್ ಚುನಾವಣೆಯಲ್ಲಿ ಮೊದಲ ಬಾರಿಗೆ ಗೆಲುವು ಸಾಧಿಸಿದರು. 1983ರಲ್ಲಿ ರಾಜ್ಯ ಚುನಾವಣೆಯಲ್ಲಿ ಭಾರತೀಯ ಲೋಕದಳದಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದರು. ಭಾರತೀಯ ಲೋಕದಳದಿಂದ ಜನತಾ ಪಕ್ಷಕ್ಕೆ ಸೇರಿದಾಗ, ಇವರನ್ನು ಹೊಸದಾಗಿ ರಚಿಸಿದ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಗಡಿಭಾಗಗಳಾದ ಕಾಸರಗೋಡು, ಬೆಳಗಾವಿ, ಕೋಲಾರ ಮುಂತಾದೆಡೆ ಪ್ರವಾಸ ಕೈಗೊಂಡು ವರದಿ ಸಲ್ಲಿಸಿದರು.
1985ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು ದಾಖಲಿಸಿದರು. ಪಶುಸಂಗೋಪನೆ ಸಚಿವರಾಗಿ ಆಯ್ಕೆಯಾದರು. ಸಂಪುಟ ಪುನರ್ರಚನೆಯ ನಂತರ ರೇಷ್ಮೆ ಮತ್ತು ಸಾರಿಗೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದರು. 1989 ರ ಕಾಂಗ್ರೆಸ್ ಅಲೆಯಲ್ಲಿ ಚುನಾವಣೆ ಸೋತ ಸಿದ್ದರಾಮಯ್ಯ, ಜನತಾ ಪಕ್ಷ ಹೋಳಾದಾಗ ಜನತಾದಳ ಸೇರಿದರು. 1992ರಲ್ಲಿ ದೇವೇಗೌಡರು ಸಮಾಜವಾದಿ ಜನತಾ ಪಕ್ಷದಿಂದ ಜನತಾದಳ ಸೇರಿದಾಗ, ಜನತಾದಳದ ಕಾರ್ಯದರ್ಶಿಯಾದರು. ಇದನ್ನೂ ಓದಿ: ಕೊನೆಗೂ ಸಿಗ್ಲಿಲ್ಲ ಡಿಕೆಶಿ ಗಡ್ಡಕ್ಕೆ ಮುಕ್ತಿ
1994 ರ ಚುನಾವನಣೆಯಲ್ಲಿ ಗೆದ್ದು ಹಣಕಾಸು ಸಚಿವರಾದರು. 1999 ರ ಚುನಾವಣೆಯ ಹೊತ್ತಿಗೆ ಜನತಾದಳ 2 ಭಾಗವಾದಾಗ, ದೇವೇಗೌಡರೊಂದಿಗೆ ಸೇರಿ ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷರಾದರು. 1999 ಚುನಾವಣೆಯಲ್ಲಿ ಸೋಲನುಭವಿಸಿದರು. 2004ರ ಹೊತ್ತಿಗೆ ಜಾತ್ಯತೀತ ಜನತಾದಳದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿತರಾದರು. 2004ರಲ್ಲಿ ಅತಂತ್ರ ವಿಧಾನಸಭೆ ರಚನೆಯಾದಾಗ, ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚನೆಯಾದಾಗ 2 ಬಾರಿ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾದರು. 2006ರ ಡಿಸೆಂಬರ್ ಉಪಚುನಾವಣೆಯಲ್ಲಿ ಸ್ಪರ್ಧಿಸಿದರು.
2008ರಲ್ಲಿ ಗೆದ್ದ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದರು. 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದರು. ಮೇ 10, 2013 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ, ಮೇ 13, 2014ರಂದು ಕರ್ನಾಟಕದ 22ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು (13 ಮೇ 2013). ಇದನ್ನೂ ಓದಿ: ಎರಡು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ಮಾಡುತ್ತೇವೆ: ರಾಮಲಿಂಗರೆಡ್ಡಿ
ಮುಖ್ಯಮಂತ್ರಿಯಾಗಿ ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಯೋಜನೆಗಳನ್ನು ಮಾಡಿದರು. ದಲಿತ ವರ್ಗಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ನೀಡಿದರು. 12-05-2018 ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಅವುಗಳಲ್ಲಿ ಚಾಮುಂಡೇಶ್ವರಿಯಲ್ಲಿ ಸೋತು, ಬಾದಾಮಿಯಲ್ಲಿ ಕಡಿಮೆ ಮತಗಳ ಅಂತರದಲ್ಲಿ ಗೆದ್ದಿದ್ದರು. ನಂತರ ವಿಧಾನಸಭೆಯ ವಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಿದರು. ಈಗ ಎರಡನೇ ಬಾರಿಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.