Bengaluru City
ವಿಷ್ಣುವರ್ಧನ್ ಪುತ್ಧಳಿ ಧ್ವಂಸಗೊಳಿಸಿದವರಿಗೆ ಶಿಕ್ಷೆ ಆಗ್ಬೇಕು: ದರ್ಶನ್ ಕಿಡಿ

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಪುತ್ಥಳಿ ಧ್ವಂಸ ಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲಬೇಕೆಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸೋ, ಆರಾಧಿಸೋ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ನಮ್ಮ ನಲ್ಮೆಯ ಸಾಹಸ ಸಿಂಹ ಡಾ. ವಿಷ್ಣು ಸರ್ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಯಾರು ಇಲ್ಲದ ಹೊತ್ತಿನಲ್ಲಿ ಧ್ವಂಸ ಮಾಡಿರುವುದು ನಾಚಿಕೆಯ ಸಂಗತಿ. ಇಂತ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ಗೇಟ್ ಅಂಡರ್ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ. ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮುನ್ನೇಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸೋ, ಆರಾಧಿಸೋ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ನಮ್ಮ ನಲ್ಮೆಯ ಸಾಹಸ ಸಿಂಹ ಡಾ|| ವಿಷ್ಣು ಸರ್ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಯಾರು ಇಲ್ಲದ ಹೊತ್ತಿನಲ್ಲಿ ಧ್ವಂಸ ಮಾಡಿರುವುದು ನಾಚಿಕೆಯ ಸಂಗತಿ. ಇಂತ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು.
ನಿಮ್ಮ ದಾಸ ದರ್ಶನ್ pic.twitter.com/eJ5nGFd6oa— Darshan Thoogudeepa (@dasadarshan) December 26, 2020
ಟೋಲ್ಗೇಟ್ ಸರ್ಕಲ್ ಗೆ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಅಂತ ಹೆಸರಿಡಲಾಗಿದೆ. ಹಾಗಾಗಿ ವಿಷ್ಣುವರ್ಧನ್ ಪ್ರತಿಮೆ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಸ್ಟ್ಯಾಚು ಇಡಲು ನಿರ್ಧರಿಸಲಾಗಿದೆ. ಹೀಗಾಗಿ ರಾತ್ರಿ ವಿಷ್ಣು ಪ್ರತಿಮೆ ತೆರವುಗೊಳಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಪ್ರತಿಮೆ ತೆಗೆಯುವ ಮೂಲಕ ಕನ್ನಡಿಗರಿಗೆ ಅವಮಾನಿಸಲಾಗಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
