– ಅ.25 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ
ಹಾವೇರಿ: ಶಿಗ್ಗಾಂವಿ (Shiggoan) ಕ್ಷೇತ್ರದ ಉಪಚುನಾವಣೆಗೆ ಮೊದಲ ದಿನವೇ ಮೂರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ.
ಹಿಂದೂಸ್ತಾನ ಜನತಾ ಪಕ್ಷದಿಂದ ತಳವಾರ ಶಿವಕುಮಾರ ಎರಡು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ (Ravikrishna Reddy) ಹಾಗೂ ಸೋಸಿಯಾಲಿಸ್ಟ್ ಪಾರ್ಟಿ (ಇಂಡಿಯಾ)ಯಿಂದ ಖಾಜಾಮೋಹಿದ್ದಿನ್ ಗುಡಗೇರಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಸಂತೋಷ್ ಹಿರೇಮಠ ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: ವಿದ್ಯುತ್ ಶಾಕ್ ತಗುಲಿ ಮಗನ ದಾರುಣ ಸಾವು – ತಾಯಿಯ ಆಕ್ರಂದನ
ಅ.25 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಅ. 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ ಹಾಗೂ ಅ.30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಇದನ್ನೂ ಓದಿ: ತಲಕಾವೇರಿಯಲ್ಲಿ ತೀಥೋದ್ಭವ ಬಳಿಕ ಹಾರಂಗಿ ಜಲಾಶಯಕ್ಕೆ ಎ ಮಂಜು, ಮಂಥರ್ ಗೌಡ ಬಾಗಿನ ಅರ್ಪಣೆ