ಹಾವೇರಿ: ಜಿಲ್ಲೆಯಾದ್ಯಂತ ಜಾರಿಯಾಗಿದ್ದ ಮಾದರಿ ನೀತಿ ಸಂಹಿತೆ ಹಿನ್ನೆಲೆ ವಿವಿಧ ಕಡೆಗಳಲ್ಲಿ ತೆರಿಗೆ ಇಲಾಖೆಯಿಂದ ಭರ್ಜರಿ ದಾಳಿ ನಡೆದಿದ್ದು, ನಗದು ಸೇರಿ 5 ಲಕ್ಷ ರೂ. ಮೌಲ್ಯದ ವಸ್ತುಗಳು ವಶಪಡಿಸಿಕೊಂಡಿದ್ದಾರೆ.ಇದನ್ನೂ ಓದಿ: ಬೆಂಗಳೂರು ಪೊಲೀಸರು ಬಲೆ ಬೀಸಿದ್ದ ರಾಬರಿ ಗ್ಯಾಂಗ್‌ನ ಫಹೀಮ್ ಯುಪಿಯಲ್ಲಿ ಬಂಧನ
Advertisement
ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆ ಹಾವೇರಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿತ್ತು. ಈ ವೇಳೆ ವಾಣಿಜ್ಯ ತೆರಿಗೆ ಇಲಾಖೆಯಿಂದ ದಾಳಿ ನಡೆಸಿದ್ದು, 2,68,270 ರೂ. ನಗದು, 1 ಲಕ್ಷ 60 ಸಾವಿರ ರೂ. ಮೌಲ್ಯದ 8 ಕೆ.ಜಿ 240 ಗ್ರಾಂ ಗಾಂಜಾ, 55,13,926 ಲಕ್ಷ ರೂ. ಮೌಲ್ಯದ 4,686 ಲೀಟರ್‌ನಷ್ಟು ಮದ್ಯ ವಶಪಡಿಸಿಕೊಳ್ಳಲಾಗಿದೆ. ಇನ್ನೂ 3 ಲಕ್ಷ ರೂ. ಮೌಲ್ಯದ 5 ವಾಹನ ಜಪ್ತಿ ಮಾಡಲಾಗಿದ್ದು, ಒಟ್ಟು ವಾಣಿಜ್ಯ ತೆರಿಗೆ ಇಲಾಖೆಯಿಂದ 5,34,850 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
Advertisement
ಅಬಕಾರಿ ಇಲಾಖೆಯಿಂದ ಒಟ್ಟು 232 ಪ್ರಕರಣ ದಾಖಲಾಗಿದ್ದು, ಮಾದರಿ ನೀತಿ ಸಂಹಿತಿ ಉಲ್ಲಂಘನೆ ಸಂಬಂಧ 3 ಕೇಸ್ ದಾಖಲಿಸಲಾಗಿದೆ.ಇದನ್ನೂ ಓದಿ: ಏರ್ ಇಂಡಿಯಾದೊಂದಿಗೆ ವಿಸ್ತಾರ ವಿಲೀನ – ದೋಹಾದಿಂದ ಮುಂಬೈಗೆ ಮೊದಲ ವಿಮಾನ ಹಾರಾಟ