ಹಾವೇರಿ: ಶಿಗ್ಗಾಂವಿ ಉಪಚುನಾವಣೆ ( Shiggoan By Election) ಹಿನ್ನೆಲೆ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ (Yasir Ahmed Khan Pathan) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಪ್ರಾಯ ಇಲ್ಲ. ನಾವು ಎಲ್ಲರೂ ಈ ಮೊದಲೇ ಜನತಾ ನ್ಯಾಯಾಲಯದಲ್ಲಿ ಪ್ರಮಾಣ ಮಾಡಿದ್ದೇವೆ. ಯಾರಿಗೇ ಟಿಕೆಟ್ ಸಿಕ್ಕರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿದೆ ಹೇಳಿದ್ದೆ. ಕಾಂಗ್ರೆಸ್ ಬಗ್ಗೆ ಕ್ಷೇತ್ರದಲ್ಲಿ ಉತ್ತಮ ಒಲವು ಇದೆ. ಕಳೆದ ನಾಲ್ಕು ತಿಂಗಳಿಂದ ನಿರಂತರವಾಗಿ ಕ್ಷೇತ್ರ ಸುತ್ತಾಡಿದ್ದೇನೆ ಎಂದರು. ಇದನ್ನೂ ಓದಿ: ಬಸ್ ಸೀಟಿಗಾಗಿ ಚಪ್ಪಲಿಯಲ್ಲಿ ಬಡಿದಾಡಿದ ಮಹಿಳೆಯರು
Advertisement
Advertisement
ಹಾವೇರಿ (Haveri) ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಟಿಕೆಟ್ ನೀಡಲಾಗಿದೆ. ಅಲ್ಪಸಂಖ್ಯಾತರ ಸಮಾಜಕ್ಕೆ ಟಿಕೆಟ್ ಸಿಕ್ಕಿದೆ. ನಮ್ಮ ಮೇಲೆ ಯಾವುದೇ ಕೇಸ್ ಇಲ್ಲ. ಅಜ್ಜಂಪೀರ್ ಖಾದ್ರಿ ಅವರು ಹಿರಿಯರು, ಅವರು ಯಾವ ವಿಚಾರದಲ್ಲಿ ನನ್ನ ಮೇಲೆ ಕೇಸ್ ಇದೆ ಎಂದು ಹೇಳಿದ್ದಾರೆ ನನಗೆ ಗೊತ್ತಿಲ್ಲ. ನಮ್ಮ ರಾಜ್ಯ ನಾಯಕರು ಅವರು ಜೊತೆಗೆ ಮಾತನಾಡುತ್ತಾರೆ. ಅವರ ಆರೋಪದಲ್ಲಿ ಹುರುಳು ಇಲ್ಲ. ತಮ್ಮ ಪಕ್ಷದ ಹಿರಿಯ ಮತ್ತು ಕ್ಷೇತ್ರದ ಜನರಿಗೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದರು. ಇದನ್ನೂ ಓದಿ: ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
Advertisement