ನವದೆಹಲಿ: ಶಿಕಾರಿಪುರ ಕ್ಷೇತ್ರಕ್ಕೆ ಬಿ.ವೈ.ವಿಜಯೇಂದ್ರ ಅವರನ್ನು ಉತ್ತರಾಧಿಕಾರಿಯಾಗಿ ಘೋಷಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ಧಾರದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೈಕಮಾಂಡ್‌ಗೆ ವರದಿ ನೀಡಲಿದ್ದಾರೆ.
ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಕಾರ್ಯಕ್ರಮದ ಹಿನ್ನೆಲೆ ನಾಳೆ ದೆಹಲಿಗೆ ತೆರಳುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿದ್ದು, ಈ ಬಗ್ಗೆ ಮಾಹಿತಿ ನೀಡಿ ಸಮಾಲೋಚನೆ ನಡೆಸಲಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಮೊದಲೇ ಗೊತ್ತಿತ್ತು ವರುಣಾ ರಹಸ್ಯ – ಸಿದ್ದುಗೆ ಗುಟ್ಟು ಬಿಟ್ಟುಕೊಟ್ಟಿದ್ರು ಬಿಎಸ್‍ವೈ
Advertisement
Advertisement
ಬಿಎಸ್‌ವೈ ನಿರ್ಧಾರದ ಬಗ್ಗೆ ಈಗಾಗಲೇ ರಾಜ್ಯ ಬಿಜೆಪಿ ಘಟಕ ಕೇಂದ್ರ ನಾಯಕರ ಗಮನ ಸೆಳೆಯುವ ಪ್ರಯತ್ನ ಮಾಡಿದೆ. ಇದನ್ನು ಹೊರತುಪಡಿಸಿ ಸಿಎಂ ಪ್ರತ್ಯೇಕವಾಗಿ ವರಿಷ್ಠರ ಜೊತೆಗೆ ಈ ಬಗ್ಗೆ ಚರ್ಚೆ ಮಾಡಲಿದ್ದು, ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.
Advertisement
Advertisement
ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಬಸವರಾಜ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಉಸ್ತುವಾರಿ ಅರುಣ್ ಸಿಂಗ್ ಸೇರಿ ಹಲವು ಪ್ರಮುಖ ನಾಯಕರನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ನಾಯಕರಿಂದ ಮಾಹಿತಿ ಪಡೆದ ಬಳಿಕ ಹೈಕಮಾಂಡ್ ಬಿಎಸ್‌ವೈ ನಿರ್ಧಾರದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ. ಇದನ್ನೂ ಓದಿ: ಶಿವಸೇನೆಯಲ್ಲಿ ಸಿಂಬಲ್ ಫೈಟ್- ಉದ್ಧವ್, ಶಿಂಧೆ ಬಣಕ್ಕೆ ಚುನಾವಣೆ ಆಯೋಗ ನೋಟಿಸ್