ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಶಿಖರ್ ಧವನ್ (Shikhar Dhawan) ಅವರು ಪತ್ನಿ ಆಯೇಷಾ ಮುಖರ್ಜಿಗೆ (Ayesha Mukherjee) ವಿಚ್ಛೇದನ ನೀಡಿದ್ದಾರೆ.
ದೆಹಲಿಯ ಪಟಿಯಾಲ ಹೌಸ್ ಕೋರ್ಟ್ (ಕೌಟುಂಬಿಕ ನ್ಯಾಯಾಲಯ) ಬುಧವಾರ ಶಿಖರ್ ಮತ್ತು ಆಯೇಷಾ ವಿಚ್ಛೇದನವನ್ನು (Shikhar Dhawan-Ayesha Mukherjee Divorce) ಮಂಜೂರು ಮಾಡಿದೆ.
Advertisement
Advertisement
2012ರಲ್ಲಿ ಶಿಖರ್ ಧವನ್ ಹಾಗೂ ಆಯೇಷಾ ಮುಖರ್ಜಿ ಮದುವೆಯಾಗಿದ್ದರು. ಈ ದಂಪತಿಗೆ ಜೋರಾವರ್ ಎಂಬ ಮಗನಿದ್ದಾನೆ. ಆಯೇಷಾಗೆ ಇದು ಎರಡನೇ ಮದುವೆಯಾಗಿದ್ದು, ಶಿಖರ್ ಗಿಂತ 10 ವರ್ಷ ದೊಡ್ಡವರು.
Advertisement
Advertisement
ಡಿವೋರ್ಸ್ ಯಾಕೆ..?: ಪುತ್ರನಿಂದ ಬೇರೆಯಾಗಿ ವರ್ಷಗಟ್ಟಲೆ ಬದುಕುವಂತೆ ಒತ್ತಾಯಿಸಿ ಪತ್ನಿ ಮಾನಸಿಕ ಹಿಂಸೆ ಕೊಟ್ಟಿದ್ದಾರೆ ಎಂದು ಶಿಖರ್ ಆರೋಪಿಸಿದ್ದರು. ಈ ಆರೋಪಗಳನ್ನು ಆಯೇಷಾ ಸಮರ್ಥನೆ ಮಾಡಿಕೊಳ್ಳಲು ವಿಫಲರಾಗಿದ್ದಾರೆ ಎಂದು ಕೋರ್ಟ್ ಹೇಳಿದೆ. ವಿಚ್ಛೇದನ ಅರ್ಜಿಯಲ್ಲಿ ಪತ್ನಿ ವಿರುದ್ಧ ಧವನ್ ಮಾಡಿರುವ ಎಲ್ಲಾ ಆರೋಪಗಳನ್ನು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಹರೀಶ್ ಕುಮಾರ್ ಒಪ್ಪಿಕೊಂಡಿದ್ದಾರೆ.
ಮಗನ ಖಾಯಂ ಕಸ್ಟಡಿಗೆ ಸಂಬಂಧಿಸಿದಂತೆ ಕೋರ್ಟ್ ಯಾವುದೇ ಆದೇಶ ನೀಡಿಲ್ಲ. ಆದರೆ ಧವನ್‍ಗೆ ತನ್ನ ಮಗನನ್ನು ಭೇಟಿ ಮಾಡಲು ಮತ್ತು ವೀಡಿಯೋ ಕರೆ ಮೂಲಕ ಮಾತನಾಡುವ ಹಕ್ಕನ್ನು ಕೋರ್ಟ್ ನೀಡಿದೆ. ಪ್ರಸ್ತುತ ಆಯೇಷಾ ಅವರು ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಎರಡರ ಪೌರತ್ವವನ್ನು ಅವರು ಹೊಂದಿದ್ದಾರೆ.
Web Stories