ಬಾಲಿವುಡ್ ಬ್ಯೂಟಿ ಕನ್ನಡತಿ ಶಿಲ್ಪಾ ಶೆಟ್ಟಿ 47ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಹುಟ್ಟು ಹಬ್ಬವನ್ನು ಪತಿ ರಾಜ್ ಕುಂದ್ರಾ ಮತ್ತು ಆಪ್ತರ ಜೊತೆ ಶಿಲ್ಪಾ ಶೆಟ್ಟಿ ಆಚರಿಸಿಕೊಂಡಿದ್ದಾರೆ. ಸದ್ಯ ಈ ಹುಟ್ಟುಹಬ್ಬದ ಸಂಭ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಶಿಲ್ಪಾ ಶೆಟ್ಟಿ (ಜೂ.8)ರಂದು 47ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇದೇ ಖುಷಿಯಲ್ಲಿ ಅದ್ದೂರಿಯಾಗಿ ಪತಿ ರಾಜ್ ಕುಂದ್ರಾ ಮತ್ತು ಆಪ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಬ್ಲ್ಯಾಕ್ ಕಲರ್ ಡ್ರೆಸ್ನಲ್ಲಿ ಶಿಲ್ಪಾ ಶೆಟ್ಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಪತ್ನಿಗೆ ಶಿಲ್ಪಾ ಹುಟ್ಟುಹಬ್ಬಕ್ಕೆ ವ್ಯಾನಿಟಿ ವ್ಯಾನ್ ಗಿಫ್ಟ್ ಮಾಡಿದ್ದಾರೆ. ಇದನ್ನೂ ಓದಿ: ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದ ಮೊದಲ ವಿಮರ್ಶೆ ಮಾಡಿದ ನಟ ರಮೇಶ್ ಅರವಿಂದ್
ಅಶ್ಲೀಲ ಚಿತ್ರಗಳ ನಿರ್ಮಾಣದ ಕೇಸ್ನಿಂದ ಹೊರಬಂದ ಮೇಲೆ ಇದೀಗ ಕಾಣಿಸಿಕೊಂಡಿರುವ ರಾಜ್ ಕುಂದ್ರಾ, ಪತ್ನಿ ಶಿಲ್ಪಾ ಶೆಟ್ಟಿ ಬರ್ತಡೇಯನ್ನು ಅದ್ದೂರಿಯಾಗಿ ಆಚರಿಸಿ ಸಪ್ರೈಸ್ ನೀಡಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗುತ್ತಿದೆ.