ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ವಿರುದ್ಧವಾಗಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
Advertisement
ಉದ್ಯಮಿ ನಿತಿನ್ ಬಾರೈ ಅವರು ನೀಡಿದ ದೂರಿನ ಮೇರೆಗೆ ನಟಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ ನಿನ್ನೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
Advertisement
Advertisement
ಶಿಲ್ಪಾ ಶೆಟ್ಟಿ ಅವರು ಆಗಾಗ ಫಿಟ್ನೆಸ್ ಕುರಿತಾಗಿ ತಮಗೆ ತಿಳಿದಿರುವ ಮಾಹಿತಿಯನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತರರಿಗೂ ಅವರು ಯೋಗ ಹೇಳಿಕೊಡುತ್ತಾರೆ. ತಮ್ಮದೇ ಫಿಟ್ನೆಸ್ ಕೇಂದ್ರಗಳನ್ನು ಹೊಂದಿರುವ ಅವರು, ದೇಶದ ಬೇರೆ ಬೇರೆ ನಗರದಲ್ಲಿ ಕೂಡ ಅದರ ಶಾಖೆ ಆರಂಭಿಸಲು ಆಸಕ್ತಿ ತೋರಿಸಿದ್ದರು. ಅದಕ್ಕಾಗಿ ಕೆಲವು ಉದ್ಯಮಿಗಳಿಗೆ ಹೂಡಿಕೆ ಮಾಡುವಂತೆ ಹೇಳಿ ಹಣ ಪಡೆದಿದ್ದರು. ಆದರೆ ಈಗ ಫಿಟ್ನೆಸ್ ಕೇಂದ್ರವನ್ನೂ ಆರಂಭಿಸಿಲ್ಲ, ಹಣವನ್ನೂ ವಾಪಸ್ ನೀಡ್ತಿಲ್ಲ ಎಂದು ಉದ್ಯಮಿಯೊಬ್ಬರು ಆರೋಪಿಸಿದ್ದಾರೆ. ಈ ಸಂಬಂಧ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ ಕೇಸ್ ದಾಖಲಿಸಿದ್ದಾರೆ
Advertisement
ದೂರಿನಲ್ಲಿ ಏನಿದೆ?: 2014ರ ಜುಲೈ ತಿಂಗಳಲ್ಲಿ, ಎಸ್‍ಎಫ್‍ಎಲ್ ಫಿಟ್‍ನೆಸ್ ಕಂಪನಿಯ ನಿರ್ದೇಶಕ ಕಾಶಿಫ್ ಖಾನ್, ಶಿಲ್ಪಾ ಶೆಟ್ಟಿ, ಕುಂದ್ರಾ ಮತ್ತು ಇತರರು 1.51 ಕೋಟಿ ರೂಪಾಯಿ ಹೂಡಿಕೆ ಮಾಡುವಂತೆ ಹೇಳಿದ್ದರು. ಪುಣೆಯ ಆಸುಪಾಸಿನಲ್ಲಿರುವ ಹದಪ್‍ಸರ್ ಮತ್ತು ಕೋರೆಗಾಂವ್‍ನಲ್ಲಿ ಜಿಮ್ ಮತ್ತು ಸ್ಪಾ ತೆರೆಯುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಇದು ಯಾವುದೂ ಕೂಡಾ ಕಾರ್ಯರೂಪಕ್ಕೆ ಬರಲಿಲ್ಲ. ಹಾಗಾಗಿ ನಮ್ಮ ಹಣವನ್ನು ವಾಪಸ್ ಮಾಡುವಂತೆ ಕೇಳಿದಾಗ ಬೆದರಿಕೆ ಹಾಕಲಾಗಿದೆ ಎಂದು ದೂರುದಾರರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪಂಜಾಬ್ ಚುನಾವಣೆಗೆ ಸೋನು ಸೂದ್ ಸೋದರಿ ಸ್ಪರ್ಧೆ – ಪಕ್ಷ ಇನ್ನೂ ಸಸ್ಪೆನ್ಸ್
ಈ ದೂರಿನ ಆಧಾರದ ಮೇಲೆ ಬಾಂದ್ರಾ ಪೆÇಲೀಸರು ಐಪಿಸಿ ಸೆಕ್ಷನ್ 420 (ವಂಚನೆ), 120-ಬಿ (ಕ್ರಿಮಿನಲ್ ಪಿತೂರಿ), 506 (ಕ್ರಿಮಿನಲ್ ಬೆದರಿಕೆ), ಮತ್ತು 34 (ಕಾಮನ್ ಇಂಟೆಷನ್) ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ: ರಾಹುಲ್ ಗಾಂಧಿ
ತಿಂಗಳ ಹಿಂದಷ್ಟೇ ರಾಜ್ ಕುಂದ್ರಾ ನೀಲಿ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡು ಹೊರಗೆ ಬಂದಿದ್ದಾರೆ. ಆದರೆ ಇದೀಗ ಮತ್ತೆ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಹಸು ಸಗಣಿ, ಗೋಮೂತ್ರ ಆರ್ಥಿಕತೆ ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್