– ಸಲ್ಮಾನ್ ಖಾನ್ ನಿವಾಸಕ್ಕೆ ಭದ್ರತೆ ಹೆಚ್ಚಳ
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ (66) (Baba Siddique) ಅವರು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ. ಸಿದ್ದಿಕ್ಕಿ ಅವರ ಪಾರ್ಥೀವ ಶರೀರ ವೀಕ್ಷಣೆಗೆ ಬಾಲಿವುಡ್ ದಂಡೇ ಮುಂಬೈನ ಲೀಲಾವತಿ ಆಸ್ಪತ್ರೆಗೆ (Lilavati Hospital) ದಾಂಗುಡಿಯಿಟ್ಟಿದೆ.
View this post on Instagram
ನಟಿ ಶಿಲ್ಪಾ ಶೆಟ್ಟಿ (Shilpa Shetty), ಸಲ್ಮಾನ್ ಖಾನ್, ಸಂಜಯ್ ದತ್, ರಾಜ್ ಕುಂದ್ರಾ, ಇನ್ನೂ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಬಾ ಸಿದ್ದಿಕ್ಕಿ ಅವರೊಂದಿಗಿನ ನಿಕಟ ಬಾಂಧವ್ಯವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಕುಟುಂಬದೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ಭೇಟಿ ಹೊತ್ತಲ್ಲೇ ಬೆಳಗಾವಿಯಲ್ಲಿ ʻಭವಿಷ್ಯದ ಮುಖ್ಯಮಂತ್ರಿʼ ಬ್ಯಾನರ್ – ರಾಜಕೀಯದಲ್ಲಿ ಸಂಚಲನ
ಸಲ್ಮಾನ್ ಖಾನ್ ನಿವಾಸಕ್ಕೆ ಹೆಚ್ಚಿದ ಭದ್ರತೆ:
ಸಿದ್ದಿಕಿ ಹತ್ಯೆ ಹಿಂದೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೊಯ್ ಕೈವಾಡ ಶಂಕೆ ವ್ಯಕ್ತವಾಗುತ್ತಿದ್ದಂತೆ ಮುಂಬೈನ ಗ್ಯಾಲಕ್ಸಿ ಅಪಾರ್ಟ್ಮೆಂಟ್‌ನಲ್ಲಿರುವ ಸಲ್ಮಾನ್ ಖಾನ್ *(Salman Khan) ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ನಟ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯಿ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿತ್ತು. ಇದರಿಂದ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಇದೀಗ ಸಿದ್ದಿಕ್ಕಿ ಹತ್ಯೆ ಬೆನ್ನಲ್ಲೇ ಭದ್ರತೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್ ಗ್ಯಾಂಗ್ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು
ಮುಂಬೈ ಕ್ರೈಂ ಬ್ರ್ಯಾಂಚ್ ತನಿಖೆ ಚುರುಕು:
ಘಟನೆ ಬಳಿಕ ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂಬ ಆರೋಪಿಗಳನ್ನು ಬಂಧಿಸಿರುವ ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ತನಿಖೆಗೆ 4 ವಿಶೇಷ ತಂಡಗಳನ್ನ ರಚಿಸಿದ್ದು, 2 ಆಯಾಮಗಳಿಂದ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ. ಒಂದು ಬಿಷ್ಣೋಯ್ ಗ್ಯಾಂಗ್, ಮತ್ತೊಂದು ಸ್ಲಂ ಪುನರ್ವಸತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಆದ್ರೆ ಸಿದ್ದಿಕಿ ಅವರಿಗೆ ಯಾವುದೇ ಬೆದರಿಕೆಗಳೂ ಬಂದಿರಲಿಲ್ಲ ಎನ್ನಲಾಗಿದೆ. ಇದನ್ನೂ ಓದಿ: Tungabhadra Dam | ಒಳಹರಿವು ಹೆಚ್ಚಳ – ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ
ಸ್ಫೋಟಕ ಮಾಹಿತಿ:
ಡಜನ್ ಗಟ್ಟಲೇ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಗುಜರಾತ್ ಜೈಲಿನಲ್ಲಿದ್ದಾನೆ. ಆದ್ರೆ ಅವನ ಗ್ಯಾಂಗ್‌ನಿಂದ ಉದ್ಯಮಿಗಳು, ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಲೇ ಇವೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನಲ್ಲಿ 700ಕ್ಕೂ ಹೆಚ್ಚು ಶೂಟರ್‌ಗಳಿದ್ದಾರೆ. ದೇಶಾದ್ಯಂತ ಅನೇಕ ಸಣ್ಣ ಮತ್ತು ದೊಡ್ಡ ಕ್ರಿಮಿನಲ್‌ಗಳು ಅವನಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಏನಾಗಿತ್ತು?
ಮುಂಬೈನ ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ. ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು.