CinemaKarnatakaLatestMain PostSandalwood

ಧ್ರುವ ಸರ್ಜಾ ಜೊತೆ ಸ್ಕ್ರೀನ್ ಶೇರ್ ಮಾಡ್ತಾರಾ ರವಿಮಾಮನ ಬೆಡಗಿ ಶಿಲ್ಪಾ ಶೆಟ್ಟಿ

ವಿಚಂದ್ರನ್ ಜೊತೆ ‘ರಾಜಾ ರಾಜಾ..’ ಹಾಡಿಗೆ ಹೆಜ್ಜೆ ಹಾಕಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಮತ್ತೆ ಕನ್ನಡ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಮಾತು ಗಾಂಧಿನಗರದಲ್ಲಿ ಕೇಳಿ ಬರುತ್ತಿದೆ. ಗುಳಿಕೆನ್ನೆ ಹುಡುಗಿಯ ಜೊತೆ ಈಗಾಗಲೇ ಒಂದು ಹಂತದ ಮಾತುಕತೆ ಕೂಡ ನಡೆದಿದ್ದು, ಅವರು ಕೂಡ ಸ್ಯಾಂಡಲ್ ವುಡ್ ಗೆ ಮರಳುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಂದುಕೊಂಡಂತೆ ನಡೆದರೆ, ಧ್ರುವ ಸರ್ಜಾ (Dhruv Sarja)  ನಟನೆಯ ಹೊಸ ಸಿನಿಮಾದಲ್ಲಿ ಶಿಲ್ಪಾ ಕಾಣಿಸಿಕೊಳ್ಳಲಿದ್ದಾರೆ.

ಈಗಾಗಲೇ ಜೋಗಿ ಪ್ರೇಮ್ (Jogi Prem) ಮತ್ತು ಧ್ರುವ ಕಾಂಬಿನೇಷನ್ ನ ಹೊಸ ಸಿನಿಮಾದ ಘೋಷಣೆ ಆಗಿದೆ. ಏ.24 ರಂದು ಮೈಸೂರಿನ ಚಾಮುಂಡೇಶ್ವರ ದೇವಸ್ಥಾನದಲ್ಲಿ ಚಿತ್ರಕ್ಕೆ ಮುಹೂರ್ತ ಕೂಡ ನಡೆದಿದೆ. ಅಲ್ಲಿಂದ ಈ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಇದೀಗ ಶಿಲ್ಪಾ ಶೆಟ್ಟಿ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಯಾವ ಪಾತ್ರ, ಏನು ಅನ್ನುವ ವಿಚಾರ ಸದ್ಯಕ್ಕೆ ಸಸ್ಪೆನ್ಸ್. ಆದರೆ, ಸ್ಯಾಂಡಲ್ ವುಡ್ ಗೆ (Sandalwood)ಅವರು ಮರಳುವುದು ಪಕ್ಕಾ ಎಂದೇ ಹೇಳಲಾಗುತ್ತಿದೆ. ಇದನ್ನೂ ಓದಿ:ಟಿವಿ ಬಿಗ್ ಬಾಸ್ ಸೀಸನ್ 9ಕ್ಕೆ ಭರ್ಜರಿ ತಯಾರಿ: ಹೇಗಿದೆ ಗೊತ್ತಾ ದೊಡ್ಮನೆ?

ಕೆಲವ ದಿನಗಳ ಹಿಂದಿಯಷ್ಟೇ ಬಾಲಿವುಡ್ ನ ಮತ್ತೋರ್ವ ಖ್ಯಾತ ನಟ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಈಗಾಗಲೇ ಕೆಜಿಎಫ್ ಸಿನಿಮಾದಲ್ಲಿ ಅಧೀರನಾಗಿ ಅಬ್ಬರಿಸಿರುವ ಸಂಜಯ್ ದತ್ (Sanjay Dutt), ಈ ಸಿನಿಮಾದಲ್ಲೂ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸಿನಿಮಾ ತಂಡದಿಂದ ಈ ಕುರಿತು ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಶಿಲ್ಪಾ ಶೆಟ್ಟಿ ಮತ್ತು ಸಂಜಯ್ ದತ್ ಕುರಿತು ಅಧಿಕೃತವಾಗಿ ಸಿನಿಮಾ ತಂಡವೇ ಹೇಳಬೇಕಿದೆ.

ಸಿನಿಮಾ ಶೂಟಿಂಗ್ ಗಾಗಿ ಪ್ರೇಮ್ ಈಗಾಗಲೇ ಎಲ್ಲ ಸಿದ್ಧತೆಯನ್ನೂ ಮಾಡಿಕೊಂಡಿದ್ದಾರೆ. ಧ್ರುವ ಮಾರ್ಟಿನ್ ಸಿನಿಮಾದ ಕೊನೆ ಹಂತದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಪ್ರೇಮ್ ಅವರು ತಮ್ಮ ಹೊಸ ಸಿನಿಮಾದ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಲಿದ್ದಾರೆ. ಆದಷ್ಟು ಬೇಗ ಸಿನಿಮಾ ಶುರುವಾಗಲಿದೆಯಂತೆ.

Live Tv

Leave a Reply

Your email address will not be published.

Back to top button