ಜಾಹೀರಾತು ನಿರ್ದೇಶಕನಾದ ಶೈನ್ ಶೆಟ್ಟಿ

Public TV
1 Min Read
SHINE SHETTY

ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಜಸ್ಟ್ ಮ್ಯಾರಿಡ್ (Just Married) ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಸಿನಿಮಾದಲ್ಲಿ ಅವರದ್ದು ಜಾಹೀರಾತು ನಿರ್ದೇಶಕನ ಪಾತ್ರವಂತೆ. ಅಂದಹಾಗೆ ಈ ಸಿನಿಮಾವನ್ನು ನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರಾದ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ (CR Bobby) ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. abbs studios ಸಂಸ್ಥೆಯ ಮೊದಲ ಚಿತ್ರ ಇದಾಗಿದೆ.

Just Married 2

ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ (Shine Shetty) ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.  ಸಿ.ಆರ್ ಬಾಬಿ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ‌. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ನಿರ್ದೇಶಕಿ ಸೇರ್ಪಡೆಯಾಗಿದ್ದಾರೆ. ಗಣಪತಿ ಹಬ್ಬದ ಶುಭ ಸಂದರ್ಭದಲ್ಲಿ ಈ ಚಿತ್ರದ ‘ಗಂ ಗಣೇಶಾಯ ನಮಃ’ ಎಂಬ ಹಾಡು ಬಿಡುಗಡೆಯಾಗಿತ್ತು. ಶಶಿ ಕಾವೂರ್ ಬರೆದಿರುವ ಈ ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದರು.

Just Married 4

ಸಿ.ಆರ್.ಬಾಬಿ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ‌. ಪ್ರಸ್ತುತ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ ಅವರು ಒಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ‌. ಸಂಗೀತ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಸಿ.ಆರ್.ಬಾಬಿ, ಈಗ ನಿರ್ದೇಶಕಿಯಾಗಿದ್ದಾರೆ.

 

ಹೆಸರೆ ಹೇಳುವಂತೆ ಜಸ್ಟ್ ಮ್ಯಾರಿಡ್ ಪ್ರೇಮಕಥೆಯ ಚಿತ್ರ. ಕ್ಲಾಸ್ ಹಾಗೂ ಮಾಸ್ ಎರಡು ಆಡಿಯನ್ಸ್ ಗೂ ಇಷ್ಟವಾಗುವ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ – ನಾಯಕಿಯಾಗಿ ನಟಿಸುತ್ತಿದ್ದು,  ಶೃತಿ ಹರಿಹರನ್, ಅಚ್ಯುತಕುಮಾರ್, ಸಾಕ್ಷಿ ಅಗರವಾಲ್, ರವಿಶಂಕರ್ ಗೌಡ, ವಾಣಿ ಹರಿಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.   ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಪಿ ಜೆ  ಛಾಯಾಗ್ರಹಣ, ಅಶಿಕ್ ಕುಸುಗೊಳ್ಳಿ ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ಬಾಬಾ ಭಾಸ್ಕರ್ ಅವರ ನೃತ್ಯ ನಿರ್ದೇಶನವಿದೆ. ವಿ.ನಾಗೇಂದ್ರ ಪ್ರಸಾದ್, ಶಶಿ ಕವೂರ್, ಪ್ರಮೋದ್ ಮರವಂತೆ, ಧನಂಜಯ್ ಹಾಗೂ ನಾಗಾರ್ಜುನ್ ಶರ್ಮ ಹಾಡುಗಳನ್ನು ಬರೆದಿದ್ದಾರೆ.

Share This Article