ಹಾಸನ: ಅಂಬುಲೆನ್ಸ್ ಸಿಗದೆ ನಡುರಾತ್ರಿಯಲ್ಲಿ ರಸ್ತೆಯಲ್ಲಿ ರೋಗಿಯನ್ನು ಸ್ಟ್ರೆಚರ್ ಮೂಲಕ ಸಂಬಂಧಿಕರು ಕರೆದೊಯ್ದ ಅಮಾನವೀಯ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ನಗರದ ಸಂಪಿಗೆ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಸುಮಾರು 500 ಮೀ. ದೂರವಿತ್ತು. ಒಂದು ಖಾಸಗಿ ಆಸ್ಪತ್ರೆಯಿಂದ ಮತ್ತೊಂದು ಖಾಸಗಿ ಆಸ್ಪತ್ರೆಗೆ ರೋಗಿ ಶಿಫ್ಟ್ ಮಾಡುವ ದೃಶ್ಯ ವೈರಲ್ ಆಗಿದ್ದು, ಅಂಬುಲೆನ್ಸ್ ಒದಗಿಸದ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ ರೋಗಿಯನ್ನು ಸ್ಥಳಾಂತರಿಸಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಗಂಭೀರ ಸ್ಥಿತಿಯಲ್ಲಿದ್ದರು. ಆದರೂ ತುರ್ತು ನೆರವು ದೊರೆತಿರಲಿಲ್ಲ. ಅಂಬುಲೆನ್ಸ್ ಸಿಗದೆ ತುಂತುರು ಮಳೆಯ ನಡುವೆಯೇ ರೋಗಿಯನ್ನು ಶಿಫ್ಟ್ ಮಾಡಿದ್ದಾರೆ. ಇದನ್ನೂ ಓದಿ: ಬಟದ್ರವ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಮುಖ ಆರೋಪಿ ಅರೆಸ್ಟ್
ಹೃದಯ ವಿದ್ರಾವಕ ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅಮಾನವೀಯವಾಗಿ ವರ್ತಿಸಿರುವ ಆಸ್ಪತ್ರೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರಿಂದ ಮೊಬೈಲ್‍ನಲ್ಲಿ ದೃಶ್ಯ ಸೆರೆ ಹಿಡಿದಿದ್ದಾರೆ. ದೃಶ್ಯ ಸೆರೆ ಹಿಡಿಯದಂತೆ ರೋಗಿಯ ಮನೆಯವರ ಮನವಿ ಮಾಡಿದ್ದಾರೆ. ಕಳೆದ ಎರಡು ದಿನದ ಹಿಂದೆ ಈ ಘಟನೆ ನಡೆದಿದೆ. ಇದನ್ನೂ ಓದಿ: ತಲೆಗೆ ಕಲರ್ ಹಾಕೋ ರೇಟ್ ವಿಚಾರಕ್ಕೆ ಜಗಳ- ಕತ್ತರಿಯಿಂದ ಇರಿದು ಗ್ರಾಹಕನ ಕೊಲೆ