ಹಾಸನ: ಮಂಗಳೂರಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ.
Advertisement
ಟ್ಯಾಂಕರ್ ಉರುಳಿಬಿದ್ದ ಪರಿಣಾಮ, ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗಲಾರಂಭಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಾರನಹಳ್ಳಿ ಸಮೀಪ ಹಾಸನ ಮಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನಗಳಿಗೆ ನಿರ್ಬಂಧ ವಿಧಿಸಿ ಬದಲಿ ಮಾರ್ಗ ಕಲ್ಪಿಸಲಾಗಿದೆ. ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಇಂಜಿನ್ ಒಳಗೆ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಚಾಲಕ ಸಿಕ್ಕಿಹಾಕಿಕೊಂಡು ಆತಂಕ ಸೃಷ್ಟಿಯಾಗಿತ್ತು. ಇದನ್ನೂ ಓದಿ: ಬಿಎಸ್‍ವೈ ಆಪ್ತನ ಮನೆ ಮೇಲೆ ಐಟಿ ರೇಡ್
Advertisement
Advertisement
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯರು, ಕ್ರೇನ್ ಸಹಾಯದಿಂದ ಚಾಲಕನ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಸುರಕ್ಷತಾ ದೃಷ್ಟಿಯಿಂದ ಗ್ಯಾಸ್ ಟ್ಯಾಂಕರ್ ಬಿದ್ದ ಸ್ಥಳದಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದ್ದು, ವಾಹನ ಸಂಚರಿಸಲು ಬದಲಿ ಮಾರ್ಗ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ: 2023ರಲ್ಲೂ ಬೊಮ್ಮಾಯಿ ಸಿಎಂ ಆಗಿ ದಸರಾ ಉದ್ಘಾಟಿಸಲಿದ್ದಾರೆ: ಪ್ರತಾಪ್ ಸಿಂಹ
Advertisement