ಹಾಸನ: ಕೊನೆಗೂ ಶಿರಾಡಿ ಘಾಟ್ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿದೆ. ಇಂದಿನಿಂದ ಘಾಟ್ನಲ್ಲಿ ಬಸ್ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಮಳೆಯಿಂದ ಗುಡ್ಡ ಕುಸಿದು 2 ತಿಂಗಳಿಂದ ಬೆಂಗಳೂರು-ಮಂಗಳೂರು ರಸ್ತೆ ಬಂದ್ ಆಗಿತ್ತು. ಹೆದ್ದಾರಿ ಕಾಮಗಾರಿ ಹಾಗೂ ಗುಡ್ಡ ಕುಸಿತದಿಂದ ಬರೋಬ್ಬರಿ 10 ತಿಂಗಳ ಕಾಲ ಬಸ್ ಸಂಚಾರ ಬಂದ್ ಆಗಿತ್ತು. ಸದ್ಯ ಬಸ್ ಹೊರತು ಬೇರೆ ಘನ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ.
Advertisement
ಎರಡು ದಿನಗಳ ಬಳಿಕ ಸರಕು ಲಾರಿ ಸಂಚಾರಕ್ಕೂ ಅನುಮತಿ ನೀಡಲಾಗುತ್ತದೆ. ಶಿರಾಡಿಘಾಟ್ ಜೊತೆಗೆ ಬಿಸಿಲೆ ಘಾಟ್ನಲ್ಲಿಯೂ ವಾಹನಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಘಾಟ್ ರಸ್ತೆ ಕುಸಿತ ಸ್ಥಳದಲ್ಲಿ 24 ಗಂಟೆ ಪೊಲೀಸ್ ನಿಯೋಜನೆ ಮಾಡಲಾಗುತ್ತಿದೆ.
Advertisement
Advertisement
ಸಂಚಾರಕ್ಕೆ ಮುಕ್ತ ವಿಚಾರದ ಕುರಿತು ಈ ಹಿಂದೆ ಮಂಗಳೂರು ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿದ್ದು, ಭಾರೀ ಮಳೆಯಿಂದ ರಸ್ತೆ ಮೇಲೆ ಗುಡ್ಡ ಕುಸಿತ ಉಂಟಾಗಿದ್ದ ಕಾರಣ ಶಿರಾಡಿ ಘಾಟ್ನ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿತ್ತು. ಸದ್ಯ ತೆರವು ಕಾರ್ಯಾಚರಣೆ ಪೂರ್ಣಗೊಂಡಿದೆ. ಈ ಮೊದಲು ಸೆಪ್ಟೆಂಬರ್ 5 ರಿಂದ ಲಘು ವಾಹನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಅಕ್ಟೋಬರ್ 3 ರಿಂದ ಸಾರಿಗೆ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಅಲ್ಲದೇ ಇನ್ನೆರಡು ವಾರಗಳ ಬಳಿಕ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ. ಘಾಟ್ ರಸ್ತೆಯ ಕುಸಿತ ಸ್ಥಳಗಳಲ್ಲಿ 24 ಗಂಟೆ ಪೊಲೀಸ್ ನಿಯೋಜನೆ ಮಾಡಲಾಗುತ್ತದೆ ಎಂದು ತಿಳಿಸಿದ್ದರು.
Advertisement
ಶಿರಾಡಿ ಘಾಟ್ ಕಾಂಕ್ರೀಟ್ ಆದ ಬಳಿಕ ಕಳೆದ ಜುಲೈ 15ರಂದು ಅಧಿಕೃತ ಉದ್ಘಾಟನೆ ಆಗಿತ್ತು. ಆದರೆ ಭೂಕುಸಿತ ಕಾರಣದಿಂದಾಗಿ ಶಿರಾಡಿ ಘಾಟ್ ಹೆದ್ದಾರಿ ಸ್ಥಗಿತಗೊಳಿಸಲಾಗಿತ್ತು. ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಜೊತೆಗೆ ಸಂಪಾಜೆ ಘಾಟಿಯಲ್ಲಿ ಗುಡ್ಡ ಕುಸಿತ ಸಂಭವಿದ್ದ ಪರಿಣಾಮ ರಸ್ತೆ ಸಂಪರ್ಕ ಬಂದ್ ಆಗಿತ್ತು. ಚಾರ್ಮಾಡಿ ರಸ್ತೆಯಲ್ಲಿ ವಾಹನಗಳ ದಟ್ಟನೆ ಜಾಸ್ತಿಯಾಗಿ ಭಾರೀ ಟ್ರಾಫಿಕ್ ಜಾಮ್ ಆಗುತ್ತಿರುವ ಹಿನ್ನೆಲೆಯಲ್ಲಿ ಲಘು ವಾಹನಗಳಿಗೆ ಶಿರಾಡಿ ಘಾಟಿ ರಸ್ತೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕೆಂಬ ಬೇಡಿಕೆ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಆಗಸ್ಟ್ ಕೊನೆಯ ವಾರ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ತಿಳಿಸಿದ್ದರು. ಈ ವೇಳೆ ಗಡ್ಕರಿ ಒಂದು ವಾರದ ಒಳಗಡೆ ರಸ್ತೆಯನ್ನು ದುರಸ್ತಿ ಮಾಡಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದರು. ಹೀಗಾಗಿ ಸೆಪ್ಟೆಂಬರ್ 5 ರಿಂದ ಹಾಸನ ಜಿಲ್ಲಾಡಳಿತ ಲಘು ವಾಹನಗಳಿಗೆ ಈ ರಸ್ತೆಯಲ್ಲಿ ಸಂಚರಿಸಲು ಅನುಮತಿ ನೀಡಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv