ಭಾರೀ ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟ್ ಮುಕ್ತ

Public TV
1 Min Read
shiradi ghat 1 1

ಮಂಗಳೂರು: ಲಘುವಾಹನಗಳು ಮಾತ್ರ ಸಂಚಾರ ನಡೆಸುತ್ತಿದ್ದ ಶಿರಾಡಿ ಘಾಟ್ ನಾಳೆಯಿಂದ ಘನವಾಹನ ಸಂಚಾರಕ್ಕೆ ಮುಕ್ತಾಯವಾಗಲಿದೆ. ಈ ಕುರಿತು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಯು.ಟಿ ಖಾದರ್ ಮಾಹಿತಿ ನೀಡಿದ್ದಾರೆ.

ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಜಿಲ್ಲಾ ಉಸ್ತುವಾತಿ ಸಚಿವರು ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೂ ರಸ್ತೆ ಸದೃಢವೆಂಬ ಮಾಹಿತಿ ಪಡೆದಿದ್ದಾರೆ. ಇದರ ಅನ್ವಯ ನಾಳೆ ಬೆಳಗ್ಗೆಯಿಂದ ಘನ ವಾಹನಗಳ ಸಂಚಾರ ಮುಕ್ತಗೊಳಿಸಲು ಸೂಚನೆ ನೀಡಲಾಗಿದೆ.

UT Khadar

ಮಳೆಯಿಂದ ಗುಡ್ಡ ಕುಸಿದು ಬೆಂಗಳೂರು-ಮಂಗಳೂರು ರಸ್ತೆ ಬಂದ್ ಆಗಿತ್ತು. ಹೆದ್ದಾರಿ ಕಾಮಗಾರಿ ಹಾಗೂ ಗುಡ್ಡ ಕುಸಿತದಿಂದ ಬರೋಬ್ಬರಿ 10 ತಿಂಗಳ ಕಾಲ ಬಸ್ ಸಂಚಾರ ಬಂದ್ ಆಗಿತ್ತು. ಬಳಿಕ ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಮೊದಲು ಸೆಪ್ಟೆಂಬರ್ 5 ರಿಂದ ಲಘು ವಾಹನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು.  ಅಕ್ಟೋಬರ್ 3 ರಿಂದ ಸಾರಿಗೆ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಶಿರಾಡಿ ಘಾಟ್ ಕಾಂಕ್ರೀಟ್ ಆದ ಬಳಿಕ ಕಳೆದ ಜುಲೈ 15ರಂದು ಅಧಿಕೃತ ಉದ್ಘಾಟನೆ ಆಗಿತ್ತು. ಆದರೆ ಭೂಕುಸಿತ ಕಾರಣ ಮತ್ತೆ ಶಿರಾಡಿ ಘಾಟ್ ಹೆದ್ದಾರಿ ಸ್ಥಗಿತಗೊಳಿಸಲಾಗಿತ್ತು.

MNG SHIRADI GHAT copy

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article