ಹಾಸನ: ರಸ್ತೆ ದುರಸ್ತಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿದ್ದ ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತವಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75 ರಲ್ಲಿರುವ 26 ಕಿ.ಮೀ. ಶಿರಾಡಿ ಘಾಟ್ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಸಂಚಾರ ಸ್ಥಗಿತಗೊಂಡಿತ್ತು. ಸಚಿವ ಎಚ್.ಡಿ.ರೇವಣ್ಣ ಜುಲೈ 15ರಂದು ವಾಸ್ತುಪ್ರಕಾರವಾಗಿ ಶಿರಾಡಿ ಘಾಟ್ ಉದ್ಘಾಟಿಸಿ, ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಆದರೆ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಬೃಹತ್ ವಾಹನಗಳನ್ನು ನಿಷೇಧಿಸಲಾಗಿತ್ತು. ಇದನ್ನು ಓದಿ: ವಾಸ್ತು ಪ್ರಕಾರ ಶಿರಾಡಿ ಘಾಟ್ ಉದ್ಘಾಟಿಸಿದ ಸಚಿವ ಹೆಚ್.ಡಿ.ರೇವಣ್ಣ
Advertisement
ಶಿರಾಡಿ ಘಾಟ್ ಬೆಂಗಳೂರು-ಮಂಗಳೂರು ನಡುವಿನ ಪ್ರಮುಖ ಹೆದ್ದಾರಿಯಾಗಿದ್ದು, ಲಾರಿ ಹಾಗೂ ಬಸ್ ಸಂಚಾರಕ್ಕೆ ತೊಡಕಾಗಿತ್ತು. ಇದೀಗ ಹಾಸನ-ದಕ್ಷಿಣ ಕನ್ನಡ ಜಿಲ್ಲೆಗಳ ನಡುವಿನ ಗಡಿ ಭಾಗದ 26 ಕಿ.ಮೀ ಕಾಂಕ್ರೀಟ್ ರಸ್ತೆ ಕಾಮಗಾರಿ ಸಂಪೂರ್ಣವಾಗಿದ್ದು, ಎಲ್ಲ ರೀತಿಯ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ. ಇದನ್ನು ಓದಿ: ಶಿರಾಡಿ ಘಾಟ್ ನಲ್ಲಿ ದ್ವಿಚಕ್ರ, ತ್ರಿಚಕ್ರ, ಮಿನಿ ಬಸ್, ಟೆಂಪೋ ಟ್ರಾವಲರ್ಸ್ ಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ- ಖಾದರ್