– ಜೂನ್ ಮೊದಲ ವಾರದೊಳಗೆ ಕಾಮಗಾರಿ ಮುಗಿಸುವಂತೆ ಒತ್ತಾಯ
ಹಾಸನ: ಕಳೆದ 9 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಶಿರಾಡಿ ಘಾಟ್ (Shiradi Ghat) ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇನ್ನೇನು ಮಳೆಗಾಲ ಸಮೀಪಿಸುತ್ತಿದ್ದು, ಅಷ್ಟರಲ್ಲಿ ಕಾಮಗಾರಿ ಮುಗಿಯದಿದ್ದರೆ ಈ ಬಾರಿಯೂ ವಾಹನ ಸಂಚಾರ ಅಸ್ತವ್ಯಸ್ತವಾಗುವುದು ಖಚಿತವಾಗಿದೆ. ಆದ್ದರಿಂದ ಕಾಮಗಾರಿ ಬೇಗ ಮುಗಿಸುವಂತೆ ಈ ಭಾಗದ ಜನರು ಆಗ್ರಹಿಸಿದ್ದಾರೆ.
ಹಾಸನ ಮಾರ್ಗವಾಗಿ ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಾದ ಎನ್‌ಹೆಚ್ 75ರ ಶಿರಡಿ ಘಾಟ್ ರಸ್ತೆ ಕಾಮಗಾರಿ ಆರಂಭಗೊಂಡು ಬರೋಬ್ಬರಿ 9 ವರ್ಷಗಳು ಕಳೆದಿವೆ. ಆದರೆ ಇದುವರೆಗೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಹಾಸನದಿಂದ ಸಕಲೇಶಪುರದವರೆಗೂ ಮಾತ್ರ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಸಕಲೇಶಪುರದಿಂದ ಮಾರನಹಳ್ಳಿವರೆಗೆ ಚತುಷ್ಪಥ ಸಿಮೆಂಟ್ ರಸ್ತೆ ಕಾಮಗಾರಿ ಇನ್ನೂ ನಡೆಯುತ್ತಲೇ ಇದೆ. ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್ – ಕೂದಲೆಳೆ ಅಂತರದಲ್ಲಿ ಪಾರು
ಕಳೆದ ಎರಡು ತಿಂಗಳ ಹಿಂದೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಏಪ್ರಿಲ್ ಅಂತ್ಯ ಅಥವಾ ಮೇ ಮೊದಲ ವಾರದಲ್ಲಿ ರಸ್ತೆ ಕಾಮಗಾರಿ (Road Construction) ಮುಗಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಗಡುವು ನೀಡಿದ್ದರು. ಆದರೆ ಏಪ್ರಿಲ್ ತಿಂಗಳು ಮುಗಿಯುತ್ತಾ ಬಂದಿದ್ದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಇದನ್ನೂ ಓದಿ: ಕಾರವಾರ| ಮಟ್ಕಾ ಆಡಿಸಲು ಲಂಚ ಪಡೆದ ಪೊಲೀಸ್‌ಗೆ 8 ವರ್ಷಗಳ ಬಳಿಕ ಜೈಲು ಶಿಕ್ಷೆ
ಚತುಷ್ಪಥ ರಸ್ತೆ ಕಾಮಗಾರಿಗಾಗಿ ಹಲವರಿಂದ ಭೂಸ್ವಾಧೀನಪಡಿಸಿಕೊಂಡಿದ್ದು, ಸರಿಯಾದ ಪರಿಹಾರ ನೀಡದ ಹಿನ್ನಲೆಯಲ್ಲಿ ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಇದರಿಂದಾಗಿ ಆನೆಮಹಲ್ ಬಳಿ ರಸ್ತೆ ಅಗಲೀಕರಣ ಕಾಮಗಾರಿ ನಡೆಸಲು ಸಾಧ್ಯವಾಗಿಲ್ಲ. ಇದನ್ನು ಮನಗಂಡಿರುವ ಸ್ಥಳೀಯ ಶಾಸಕ ಸಿಮೆಂಟ್ ಮಂಜು, ಭೂಮಿ ನೀಡದವರ ಜೊತೆ ಚರ್ಚಿಸಿ ಕಾಮಗಾರಿ ನಡೆಸಲು ಅವಕಾಶ ಕಲ್ಪಿಸಿಕೊಡುವುದಾಗಿ ಹೇಳಿದ್ದಾರೆ. ಇನ್ನೊಂದೆಡೆ ರಸ್ತೆ ಅಗಲೀಕರಣಕ್ಕಾಗಿ ಎರಡು ಬದಿಗಳಲ್ಲಿ ನೂರು ಅಡಿಯಷ್ಟು ಗುಡ್ಡವನ್ನು ಬಗೆಯಲಾಗಿದೆ. ಮಣ್ಣು ಕುಸಿತವಾಗುತ್ತಿರುವ ಕಡೆಗಳಲ್ಲಿ ಗೆಬ್ರಿಯನ್ ವಾಲ್ ನಿರ್ಮಿಸಲಾಗುತ್ತಿದೆ. ಒಂದು ವೇಳೆ ಭಾರಿ ಮಳೆಯಿಂದ ಮಣ್ಣು ಕುಸಿತವಾದರೆ ಗೆಬ್ರಿಯನ್ ವಾಲ್‌ಗಳು ಕೂಡ ಕುಸಿತವಾಗುವ ಸಂಭವವಿದೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಭಾರೀ ಮಳೆ – ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗೆ
ಕಳೆದ ಬಾರಿಯಂತೆ ಈ ಬಾರಿಯೂ ಅಧಿಕ ಪ್ರಮಾಣದಲ್ಲಿ ಮಳೆಯಾದರೇ ಅನಾಹುತ ಸಂಭವಿಸುವುದರ ಜೊತೆಗೆ ರಸ್ತೆ ಸಂಚಾರಕ್ಕೆ ಅಡ್ಡಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ; ರಾಯಚೂರಲ್ಲಿ ಸಿಡಿಲಿಗೆ ಇಬ್ಬರು ಬಲಿ