ಹಾಸನ: ಬುಧವಾರ ಮಧ್ಯಾಹ್ನದಿಂದ ಶಿರಾಡಿಘಾಟ್ ರಸ್ತೆಯಲ್ಲಿ ಲಘು ವಾಹನಗಳು ಸಂಚರಿಸಲು ಹಾಸನ ಜಿಲ್ಲಾಡಳಿತ ಅನುಮತಿ ನೀಡಿದೆ.
ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಈ ಮಾಹಿತಿ ನೀಡಿದ್ದು, ಲಘು ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು. ಯಾವುದೇ ಅನಾಹುತಗಳು ಸಂಭವಿಸಿದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೇ ಹೊಣೆಯಾಗುತ್ತಾರೆ ಎಂದು ತಿಳಿಸಿದ್ದಾರೆ.
Advertisement
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಶಿರಾಡಿ ಘಾಟ್ ರಸ್ತೆಯನ್ನು ಪರಿಶೀಲಿಸಿ ಸಂಚಾರಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
Advertisement
ಕಳೆದ ವಾರ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ತಿಳಿಸಿದ್ದರು. ಈ ವೇಳೆ ಗಡ್ಕರಿ ಒಂದು ವಾರದ ಒಳಗಡೆ ರಸ್ತೆಯನ್ನು ದುರಸ್ತಿ ಮಾಡಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದರು.
Advertisement
ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಜೊತೆಗೆ ಸಂಪಾಜೆ ಘಾಟಿಯಲ್ಲಿ ಗುಡ್ಡ ಕುಸಿತ ಸಂಭವಿದ್ದ ಪರಿಣಾಮ ರಸ್ತೆ ಸಂಪರ್ಕ ಬಂದ್ ಆಗಿತ್ತು. ಚಾರ್ಮಾಡಿ ರಸ್ತೆಯಲ್ಲಿ ವಾಹನಗಳ ದಟ್ಟನೆ ಜಾಸ್ತಿಯಾಗಿ ಭಾರೀ ಟ್ರಾಫಿಕ್ ಜಾಮ್ ಆಗುತ್ತಿರುವ ಹಿನ್ನಲೆಯಲ್ಲಿ ಲಘು ವಾಹನಗಳಿಗೆ ಶಿರಾಡಿ ಘಾಟಿ ರಸ್ತೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕೆಂಬ ಬೇಡಿಕೆ ವ್ಯಕ್ತವಾಗಿತ್ತು.
Advertisement