ಚಿಕ್ಕಮಗಳೂರು: ಸಂಪಾಜೆ, ಶಿರಾಡಿ ಘಾಟಿ ಬಂದ್ ಆಗಿರೋ ಹಿನ್ನೆಲೆ ಸಾವಿರಾರು ವಾಹನಗಳು ಚಾರ್ಮಾಡಿಘಾಟ್‍ನಲ್ಲಿ ಸಂಚರಿಸುತ್ತಿರುವುದರಿಂದ ವಾಹನಗಳ ದಟ್ಟಣೆ ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದೆ.
ವಾಹನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟ್, ಆರಂಭದಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಗಡಿ ಮುಟ್ಟುವವರೆಗೂ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಈ ಮಧ್ಯೆ ದೊಡ್ಡ ಗಾಡಿಗಳ ಸಂಚಾರ ಕೂಡ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ತೊಂದೊಡ್ಡುತ್ತಿವೆ. ನಾಲ್ಕೈದು ಕಿಮೀ ಗಟ್ಟಲೇ ವಾಹನಗಳು ನಿಂತಲ್ಲೇ ನಿಂತಿರುವಂತಹ ಸ್ಥಿತಿ ನಿರ್ಮಾಣವಾಗಿದೆ.
Advertisement
Advertisement
ಜೊತೆಗೆ ಮಳೆ, ಗಾಳಿ, ದಟ್ಟವಾದ ಮಂಜಿನಿಂದ ಪ್ರಯಾಣಿಕರು ಕಂಗಾಲಾಗಿದ್ದು, ವಾಹನಗಳ ಮಂದಗತಿಯ ಸಂಚಾರದಿಂದ ಮೊದಲು ಬೆಳ್ತಂಗಡಿಯ ಗಡಿ ಮುಟ್ಟಿದರೆ ಸಾಕೆಂದು ಆತಂಕದಿಂದಲೇ ಸಂಚರಿಸುತ್ತಿದ್ದಾರೆ.
Advertisement
ಶಿರಾಡಿ ಘಾಟ್ ನಲ್ಲಿ ಆಗಸ್ಟ್ 20 ರವರೆಗೆ ಲಘು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಮಡಿಕೇರಿ ಮಂಗಳೂರು ಸಂಪರ್ಕ ಕಲ್ಪಿಸುವ ಸಂಪಾಜೆ ಘಾಟ್ ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿರುವ ಕಾರಣ ಸಂಚಾರವನ್ನು ಬಂದ್ ಮಾಡಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv