ಗದಗ: ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸುನಿಲ್ ಲಮಾಣಿ ಆತ್ಮಹತ್ಯೆಗೆ ಶರಣಾದ ಚಾಲಕ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಶಾಸಕ ಚಂದ್ರು ಇತ್ತೀಚೆಗೆ ಖರೀದಿಸಿ ನಿವಾಸದಲ್ಲಿ ಸುನಿಲ್ ಲಮಾಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸುನಿಲ್ ಅವರು ಶಾಸಕ ಚಂದ್ರು ಅವರ ಸಂಬಂಧಿಯೂ ಆಗಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಯಾವುದೇ ಡೆತ್‌ನೋಟ್ ಸಿಕ್ಕಿಲ್ಲ. ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.