ಮುಂಬೈ: ಶಿರಡಿಯ (Shirdi) ಶ್ರೀ ಸಾಯಿಬಾಬಾ ದೇವಸ್ಥಾನ ಟ್ರಸ್ಟ್‌ಗೆ (Sri Saibaba Temple Trust) ಕಳೆದ ಮೂರು ವರ್ಷಗಳಲ್ಲಿ ವಿಧಿಸಲಾದ 175 ಕೋಟಿ ಆದಾಯ ತೆರಿಗೆ ಪಾವತಿಯಿಂದ (Income Tax Department) ವಿನಾಯಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ (Supreme Court) ಆದೇಶದ ಮೇರೆಗೆ ವಿನಾಯಿತಿ ನೀಡಲಾಗಿದೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2015-16ನೇ ಸಾಲಿನ ತೆರಿಗೆಯನ್ನು ನಿರ್ಣಯಿಸುವಾಗ ಆದಾಯ ತೆರಿಗೆ ಇಲಾಖೆಯು ಶ್ರೀ ಸಾಯಿಬಾಬಾ ಸಂಸ್ಥಾನವು ಧಾರ್ಮಿಕ ಟ್ರಸ್ಟ್ ಅಲ್ಲ, ಚಾರಿಟೇಬಲ್ ಟ್ರಸ್ಟ್ ಎಂದು ಪರಿಗಣಿಸಲಾಗಿತ್ತು. ಹೀಗಾಗಿ ಪಡೆದ ದೇಣಿಗೆಗೆ ಶೇ.30ರಷ್ಟು ಆದಾಯ ತೆರಿಗೆ ವಿಧಿಸಿ, 183 ಕೋಟಿಗೆ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ಸೂಚಿಸಿತ್ತು. ಇದನ್ನೂ ಓದಿ: ನರ್ಮದಾ ಘಾಟ್‍ನಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ಆರತಿ ಬೆಳಗಿದ ರಾಹುಲ್ ಗಾಂಧಿ
ತೆರಿಗೆ ವಿಧಿಸಿದ್ದನ್ನು ಪ್ರಶ್ನಿಸಿ ಟ್ರಸ್ಟ್ ಸುಪ್ರೀಂ ಕೋರ್ಟ್‍ಗೆ ರಿಟ್ ಅರ್ಜಿಯನ್ನು ಸಲ್ಲಿಸಿತು. ವಿಚಾರಣೆ ನಡೆಸಿದ್ದ ಕೋರ್ಟ್ ನಿಗದಿತ ತೆರಿಗೆಯನ್ನು ನಿರ್ಧರಿಸುವವರೆಗೆ ಪಾವತಿಸಬೇಕಾದ ತೆರಿಗೆಗೆ ತಡೆ ನೀಡಿತ್ತು. ಅಂತಿಮವಾಗಿ ಆದಾಯ ತೆರಿಗೆ ಇಲಾಖೆ ಶ್ರೀ ಸಾಯಿಬಾಬಾ ಸಂಸ್ಥಾನವನ್ನು ಧಾರ್ಮಿಕ ಮತ್ತು ಚಾರಿಟೇಬಲ್ ಟ್ರಸ್ಟ್ ಎಂದು ಪರಿಗಣಿಸಿದೆ. ಹೀಗಾಗಿ ಶ್ರೀ ಸಾಯಿಬಾಬಾ ಸಂಸ್ಥಾನಕ್ಕೆ ಕಳೆದ ಮೂರು ವರ್ಷಗಳಲ್ಲಿ ವಿಧಿಸಲಾಗಿದ್ದ 175 ಕೋಟಿ ರೂಪಾಯಿ ತೆರಿಗೆಗೆ ವಿನಾಯಿತಿ ನೀಡಲಾಗಿದೆ. ಇದನ್ನೂ ಓದಿ: ಜಮೀನಿನ ಖಾತೆ ಬದಲಾವಣೆಗಾಗಿ ಲಂಚ ಸ್ವೀಕರಿಸುತ್ತಿದ್ದ ಕಿತ್ತೂರು ತಹಶೀಲ್ದಾರ್ ಲೋಕಾಯುಕ್ತ ಬಲೆಗೆ