ಉಡುಪಿ: ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಶಿರೂರು ಶ್ರೀಗಳ ಅಸಹಜ ಸಾವಿನ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಸದ್ಯ ಮರಣೋತ್ತರ ಪರೀಕ್ಷೆ ಪೊಲೀಸರ ಕೈಗೆ ಸೇರಿದ್ದು, ಶ್ರೀಗಳ ಹೊಟ್ಟೆಯಲ್ಲಿ ವಿಷವಿರಲಿಲ್ಲ ಎಂದು ತಿಳಿಸಲಾಗಿದೆ.
ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಾಗಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್.ಎಸ್.ಎಲ್) ವರದಿ ಬರುವವರೆಗೆ ಕಾಯುವುದು ಅನಿವಾರ್ಯ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
Advertisement
ವರದಿಯಲ್ಲಿ ಏನಿದೆ?
ಸದ್ಯ ಪೊಲೀಸರ ಕೈ ಸೇರಿರುವ ವರದಿಯಲ್ಲಿ ಶಿರೂರು ಶ್ರೀಗಳ ಸ್ವಾಮೀಜಿಯ ಲಿವರ್ (ಯಕೃತ್) ಸಂಪೂರ್ಣ ಹಾನಿಯಾಗಿದ್ದು, ಎರಡೂ ಮೂತ್ರಕೋಶಗಳು ಕಾರ್ಯ ನಿರ್ವಹಿಸುತ್ತಿರಲಿಲ್ಲವಂತೆ. ಅಷ್ಟೇ ಅಲ್ಲದೆ ಅನ್ನನಾಳದಲ್ಲಿ ಹಲವು ರಂಧ್ರಗಳಿದ್ದವು, ಹೊಟ್ಟೆಯಲ್ಲಿ ರಕ್ತನಾಳಗಳು ಒಡೆದು ರಕ್ತಸ್ರಾವವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಜುಲೈ 19ರಂಂದು ಶ್ರೀಗಳು ಅನುಮಾನಾಸ್ಪದ ರೀತಿಯಲ್ಲಿ ಹರಿಪಾದ ಸೇರಿದ್ದರು. ಶ್ರೀಗಳ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಶಿರೂರು ಮೂಲ ಮಠದಲ್ಲಿ ಕಾಂಡೋಮ್ ಗಳು, ಮಹಿಳೆಯರ ಬಟ್ಟೆಗಳು ಮತ್ತು ಬಾವಿಯಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ. ಇತ್ತ ಶಿರೂರು ಶ್ರೀಗಳು ಪರಸ್ತ್ರೀ ವ್ಯಾಮೋಹಕ್ಕೆ ಸಿಲುಕಿ ಸಾವನ್ನಪ್ಪಿದ್ರಾ ಎಂಬ ಪ್ರಶ್ನೆಯೂ ಭಕ್ತಾದಿಗಳಲ್ಲಿ ಮನೆ ಮಾಡಿದೆ. ಪ್ರಾಥಮಿಕ ಮರಣೋತ್ತರ ವರದಿಯಲ್ಲಿ ಶಿರೂರು ಶ್ರೀಗಳಿಗೆ ವಿಷ ಪ್ರಾಷಾನ ಆಗಿಲ್ಲ ಎಂದು ಹೇಳಲಾಗುತ್ತಿದೆ. ಆದ್ರೆ ಎಫ್‍ಎಸ್‍ಎಲ್ ವರದಿ 6 ವಾರಗಳ ಬಳಿಕ ಪೊಲೀಸರ ಕೈ ಸೇರುವ ಸಾಧ್ಯತೆಗಳಿವೆ.
Advertisement
ಜುಲೈ 31ರಂದು ಆರಾಧನೆ:
ಲಕ್ಷ್ಮೀವರತೀರ್ಥ ಸ್ವಾಮೀಜಿ ವೃಂದಾವನಸ್ಥ ಹಿನ್ನೆಲೆಯಲ್ಲಿ ಜುಲೈ 31 ರಂದು ಶಿರೂರು ಸ್ವಾಮೀಜಿ ಆರಾಧನೆ ಕಾರ್ಯಕ್ರಮವಿದೆ. ಶ್ರೀಗಳು ನಿಧನ ಹೊಂದಿದ ಹದಿಮೂರನೇ ದಿನ ಸೋದೆಮಠದ ನೇತೃತ್ವದಲ್ಲಿ ಈ ಆರಾಧನೆ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಹಿರಿಯಡ್ಕ ಸಮೀಪದ ಮೂಲಮಠ ಶೀರೂರಿನಲ್ಲಿ ಆರಾಧನಾ ಪ್ರಕ್ರಿಯೆ ನಡೆಯಲಿದೆ.