ಕಾರವಾರ: ಶಿರೂರು ಭೂ ಕುಸಿತದ (Shirur Landslide) ಬಳಿಕ ಗಂಗಾವಳಿ ನದಿಯಾಳದಲ್ಲಿ (Gangavali River) ಬಿದ್ದ ಟ್ರಕ್ ಕೊನೆಗೂ ಪತ್ತೆಯಾಗಿದೆ.
ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು.
Advertisement
ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು. ಇದನ್ನೂ ಓದಿ: ನಾಗಮಂಗಲ ಗಲಭೆ ಬೆನ್ನಲ್ಲೇ ಗ್ರಾಮ ತೊರೆದು ಬಂಧನ ಭೀತಿಯಲ್ಲಿ ಯುವಕ ಸಾವು
Advertisement
Advertisement
ಈಗ ಟ್ರಕ್ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.
Advertisement
ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್‌ನಲ್ಲಿ ಕೋಝಿಕ್ಕೋಡ್ ಕಡೆಗೆ ಹೋಗುತ್ತಿದ್ದರು. ಇದನ್ನೂ ಓದಿ: ಪೇಜರ್ ಬ್ಲಾಸ್ಟ್ ಕೇಸ್‌ನಲ್ಲಿ ಟ್ಟಿಸ್ಟ್ – ಘಟನೆ ಹಿಂದೆ ಭಾರತೀಯ ಮೂಲದ ಉದ್ಯಮಿಯ ಕೈವಾಡ ಇರೋದು ನಿಜವೇ?