– 90 ಲಕ್ಷ ರೂ. ವೆಚ್ಚದಲ್ಲಿ ಕಾಣೆಯಾದವರ ಶೋಧ ಕಾರ್ಯ
ಕಾರವಾರ: ಜುಲೈ ತಿಂಗಳಿನಲ್ಲಿ ಸಂಭವಿಸಿದ್ದ ಶಿರೂರು ಭೂಕುಸಿತ ದುರಂತದ (Shiruru LandSlide) ಹಿನ್ನಲೆ ಇದೀಗ ಮತ್ತೆ ಶವಗಳ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.
ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾದ (Ankola) ಶಿರೂರಿನಲ್ಲಿ (Shiruru) ಜುಲೈ 16ರಂದು ಭೂಕುಸಿತವಾಗಿ 11 ಜನ ಮೃತಪಟ್ಟಿದ್ದು, 8 ಜನರ ಶವ ಶೋಧ ಮಾಡಲಾಗಿತ್ತು. ಆದರೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಮೃತದೇಹಗಳು ದೊರೆಯದೇ ಮುಳುಗು ತಜ್ಞರು ಶೋಧ ನಡೆಸಿದರೂ ಮಳೆಯ ಕಾರಣ ಯತ್ನಗಳು ವಿಫಲವಾಗಿದ್ದವು. ಹೀಗಾಗಿ ಜುಲೈ 28 ರಂದು ಕಾರ್ಯಾಚರಣೆ ಸ್ಥಗಿತ ಮಾಡಲಾಗಿತ್ತು. ಇದರ ನಂತರ ಶೋಧಕ್ಕೆ ಪ್ರಯತ್ನ ನಡೆಸಿದರೂ ಗಂಗಾವಳಿ ನದಿಯಲ್ಲಿ ಮಳೆಯಿಂದ ನೀರು ಹೆಚ್ಚಾದ ಪರಿಣಾಮ ಮುಳುಗು ತಜ್ಞರು ಸಹ ಕೈಚೆಲ್ಲಿ ಕೂರುವಂತಾಗಿತ್ತು.ಇದನ್ನೂ ಓದಿ: ಪೇಜರ್ ಆಯ್ತು ಈಗ ಹಿಜ್ಬುಲ್ಲಾ ಘಟಕಗಳಲ್ಲಿ ವಾಕಿಟಾಕಿಗಳ ಸ್ಫೋಟ – 14 ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ
ಈ ಹಿನ್ನೆಲೆಯಲ್ಲಿ ಗೋವಾದ ಅಭಿಷೇನಿಯ ಓಷನ್ ಸರ್ವಿಸಸ್ ಕಂಪನಿಗೆ 90 ಲಕ್ಷದ ಟೆಂಡರ್ ನೀಡಿ ಇದೀಗ ಕಾರವಾರಕ್ಕೆ ಡ್ರಜ್ಜಿಂಗ್ ಬೋಟ್ (Dredging Boat) ತರಿಸಲಾಗಿದ್ದು, ಶುಕ್ರವಾರದಿಂದ ಕಾರ್ಯಾಚರಣೆ ನಡೆಸಲಿದೆ.
ಇನ್ನೂ ಹೆದ್ದಾರಿ ಪ್ರಾಧಿಕಾರ, ಶಾಸಕರ ನಿಧಿ ಹಾಗೂ ದಾನಿಗಳ ಸಹಾಯದಿಂದ 90 ಲಕ್ಷ ಹಣ ಒದಗಿಸಲಾಗಿದ್ದು, ಮುಂಗಡವಾಗಿ ಡ್ರಜ್ಜಿಂಗ್ ಬೋಟ್‌ಗೆ 40 ಲಕ್ಷ ರೂ. ಹಣ ಸಂದಾಯ ಮಾಡಲಾಗಿದೆ. ಈ ಮೊದಲು ಶವ ಶೋಧದ ನಂತರ ಗಂಗಾವಳಿ ನದಿಯಲ್ಲಿ ಭೂ ಕುಸಿತದಿಂದ ಉಂಟಾದ ಗುಡ್ಡದ ಮಣ್ಣನ್ನು ತೆರವು ಮಾಡುವುದಾಗಿ ಕಾರವಾರದ ಶಾಸಕ ಸತೀಶ್ ಸೈಲ್ ತಿಳಿಸಿದ್ದರು. ಕಾರವಾರದ ಬಂದರಿನಿಂದ ಗಂಗಾವಳಿ ನದಿಯವರೆಗೆ ಸಮುದ್ರದ ಮೂಲಕ ಡ್ರಜ್ಜಿಂಗ್ ಬೋಟ್ ಕೊಂಡೊಯ್ಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ದಾಖಲು
ಸದ್ಯ ಅಬ್ಬರದ ಮಳೆ ನಿಂತಿದೆ. ಈಗಾಗಲೇ ಭೂ ಕುಸಿತದಿಂದ ಹಾನಿಯಾಗಿರುವ ಪ್ರದೇಶದ ಮಣ್ಣು ತೆರವಿಗೆ ಕೋಟಿಗಟ್ಟಲೇ ಹಣ ವ್ಯಯಿಸಲಾಗಿದೆ. ಜೊತೆಗೆ ದೆಹಲಿಯಿಂದ ಬಂದ ಕ್ವಿಕ್ ಸೆಕ್ಯುರಿಟಿ ಸರ್ವಿಸ್ ಸೆಲ್ಯೂಷನ್‌ನ ದ್ರೋಣ್ ವಿಶೇಷ ತಂಡಕ್ಕೆ ಲಕ್ಷಗಟ್ಟಲೆ ಹಣ ನೀಡಬೇಕಿದ್ದು, ಇದೀಗ ಹಣದ ಕೊರತೆಯಿದ್ದರೂ ದಾನಿಗಳು, ಶಾಸಕರ ನಿಧಿಯ ಹಣ ಬಳಸಿ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.