ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ (Ankola) ತಾಲೂಕಿನ ಶಿರೂರಿನಲ್ಲಿ ಭೂ ಕುಸಿತವಾಗಿ (Shirur Landslide) 29 ದಿನವಾಗಿದೆ. ಇದರ ಬೆನ್ನಲ್ಲೇ ಗಂಗಾವಳಿ ನದಿಯಲ್ಲಿ ಕಾಣೆಯಾದ ಮೂವರ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಹಿಂದೇಟು ಹಾಕಿತ್ತು. ಆದರೆ ಕಾರವಾರದ ಶಾಸಕ ಸತೀಶ್ ಸೈಲ್ ಅವರ ಸೂಚನೆಯಂತೆ ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆಯವರು ಗಂಗಾವಳಿ ನದಿಯಲ್ಲಿ ಸಂಜೆ ವೇಳೆಯಲ್ಲಿ ಶೋಧಕಾರ್ಯಕ್ಕಿಳಿದಿದ್ದು, ಗ್ಯಾಸ್ ಟ್ಯಾಂಕರ್‌ನ ಚಿಕ್ಕ ಭಾಗವನ್ನು ಶೋಧ ನಡೆಸಿ ಹೊರತೆಗೆದಿದ್ದಾರೆ.
ಕೇರಳದ ಲಾರಿ ಚಾಲಕ ಅರ್ಜುನ್, ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಶವಕ್ಕಾಗಿ ಶೋಧ ನಡೆಸಬೇಕಿದ್ದು, ಇದೀಗ ಗಂಗಾವಳಿ ನದಿಯಲ್ಲಿ ಜಿಲ್ಲಾಡಳಿತದ ತಡೆಯ ಮಧ್ಯೆಯೇ ಶೋಧ ಕಾರ್ಯ ಮುಂದುವರೆದಿದೆ. ಜಿಲ್ಲಾಡಳಿತದಿಂದ ಇದುವರೆಗೂ ಅಧಿಕೃತ ಅನುಮತಿ ಸಿಕ್ಕಿಲ್ಲ. ಈ ಹಿನ್ನೆಲೆ ಶಾಸಕ ಸತೀಶ್ ಸೈಲ್ ನೇತೃತ್ವದಲ್ಲಿ ಈಶ್ವರ್ ಮಲ್ಪೆ ಗಂಗಾವಳಿ ನದಿಗೆ ಇಳಿದಿದ್ದಾರೆ. ಸೇನಾ ತಂಡ ಈ ಹಿಂದೆ ಗುರುತಿಸಿದ ಜಾಗದಲ್ಲಿ ಮತ್ತೊಮ್ಮೆ ಮುಳುಗಿ ಈಶ್ವರ ಮಲ್ಪೆ ಶೋಧ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಶಾಸಕ ಸತೀಶ್ ಸೈಲ್ ಖುದ್ದು ಸ್ಥಳಕ್ಕೆ ಆಗಮಿಸಿದ್ದರು. ಇವರೊಂದಿಗೆ ಕೇರಳ ರಾಜ್ಯದ ಶಾಸಕ ಆಶ್ರಫ್ ಕೂಡ ಹಾಜರಿದ್ದರು. ಇದನ್ನೂ ಓದಿ: HMT ಜಾಗವನ್ನು ರಾಜ್ಯ ಸರ್ಕಾರಕ್ಕೆ ನೀಡಲ್ಲ: ಖಂಡ್ರೆ ವಿರುದ್ಧ ಹೆಚ್‌ಡಿಕೆ ಆಕ್ರೋಶ
Advertisement
Advertisement
Advertisement
ಇನ್ನು ಶೋಧ ಕಾರ್ಯಾಚರಣೆ ವೇಳೆ ಲಾರಿಯ ಜಾಕ್ ಪತ್ತೆಯಾಗಿದೆ. ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಪತ್ತೆ ಮಾಡಲಾಗಿದೆ. ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್ ಕಾರ್ಯಾಚರಣೆ ವೇಳೆ ಜಾಕ್ ಪತ್ತೆಯಾಗಿದ್ದು, ಸಿಕ್ಕಿರುವ ಜಾಕ್ ಅರ್ಜುನ್ ಓಡಿಸುತ್ತಿದ್ದ ಲಾರಿಯದ್ದೇ ಎಂದು ಲಾರಿ ಮಾಲಿಕ ಮುಫಿನ್ ಖಚಿತ ಪಡಿಸಿದ್ದಾರೆ. ಲಾರಿಯ ಎರಡು ಬಿಡಿ ಭಾಗಗಳು ಕೂಡ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಒಂದು ಲಾರಿ ಬಾಗಿಲಿನ ಕೀಲು ಹಾಗೂ ಜಾಕ್ ಪತ್ತೆಯಾಗಿದೆ. ಬಾಗಿಲಿನ ಕೀಲು ತನ್ನ ವಾಹನದ್ದಲ್ಲ. ಆದರೆ ಜಾಕ್ ಮಾತ್ರ ತನ್ನ ವಾಹನದ್ದೇ ಎಂದು ನಾಪತ್ತೆಯಾದ ಬೆಂಜ್ ಲಾರಿಯ ಮಾಲಿಕ ಮುಫಿನ್ ಹೇಳಿದ್ದಾರೆ. ಇದನ್ನೂ ಓದಿ: Tungabhadra Dam| ಗೇಟ್ ಕೊಚ್ಚಿ ಹೋದ ಪ್ರಕರಣದ ತನಿಖೆಯಾಗಲಿ: ಹೆಚ್‌ಡಿಕೆ ಆಗ್ರಹ
Advertisement
ಕಾರ್ಯಾಚರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರ್ ಮಲ್ಪೆ (Eshwar Malpe), ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಾಚರಣೆ ಆರಂಭ ಮಾಡಿದೆವು. ನಿರಂತರ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ಮಾಡಲಾಯಿತು. ಕಾರ್ಯಾಚರಣೆ ವೇಳೆ ಬೆಂಜ್ ಲಾರಿಯ ಜಾಕ್ ಪತ್ತೆ ಆಗಿದೆ. ಜಾಕ್ ಪತ್ತೆ ಆಗಿದ್ದ ಬಳಿಯೇ ಕೆಳಗೆ ಲಾರಿ ಇರುವುದು ಖಚಿತವಾಗಿದೆ. ನಾಳೆ ಬೆಳಗ್ಗೆ 8:30ಕ್ಕೆ ಮತ್ತೆ ಕಾರ್ಯಾಚರಣೆ ಆರಂಭ ಮಾಡುತ್ತೇವೆ. ಲಾರಿ ಇಂತಹದ್ದೇ ಸ್ಥಳದಲ್ಲಿ ಇದೆ ಎಂಬುವುದು ಖಚಿತ ಆಗಿದೆ. ಆದರೆ ಆ ಲಾರಿಯ ಮೇಲೆ ದೊಡ್ಡ ಪ್ರಮಾಣದಲ್ಲಿ ಮಣ್ಣು ಬಿದ್ದಿದೆ. ಮಣ್ಣನ್ನು ತೆರವು ಮಾಡುವ ಕಾರ್ಯದ ಬಳಿಕ ಮೃತ ದೇಹಗಳು ಸಿಗುವ ಸಾಧ್ಯತೆಯಿದೆ ಎಂದರು. ಇದನ್ನೂ ಓದಿ: ಹೆಚ್ಚುವರಿ ನೀರು ಲೆಕ್ಕಕ್ಕೆ ಪರಿಗಣಿಸಿ – CWRC ಮುಂದೆ ಕರ್ನಾಟಕದ ಮನವಿ