ತಿರುವನಂತಪುರಂ: ಶಬರಿಮಲೆಗೆ ಮಹಿಳೆಯರು ಪ್ರವೇಶ ಮಾಡಿದರೆ ನಮ್ಮ ಮಹಿಳಾ ಕಾರ್ಯಕರ್ತೆಯರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲಿದ್ದಾರೆ ಎಂದು ಕೇರಳದ ಶಿವಸೇನೆ ಹೇಳಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಶಿವಸೇನಾ ಸದಸ್ಯರಾದ ಪೆರಿಂಗಂಮ್ಮಾಲಾ ಅಜಿ, ಸುಪ್ರಿಂ ಕೋರ್ಟ್ ಆದೇಶವನ್ನ ಖಂಡಿಸಿ, ಇದೇ ಅಕ್ಟೋಬರ್ 17 ಮತ್ತು 18 ರಂದು ಪಂಪಾ ನದಿಯ ತೀರದಲ್ಲಿ ನಮ್ಮ ಮಹಿಳಾ ಕಾರ್ಯಕರ್ತರೆಲ್ಲಾ ಸೇರಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
Advertisement
ಆತ್ಮಹತ್ಯೆ ಮಾಡಿಕೊಳ್ಳಲಿರುವ ಮಹಿಳೆಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಒಂದು ವೇಳೆ ಮಹಿಳೆಯರು ಶಬರಿಮಲೆಗೆ ಪ್ರವೇಶಿಸಿದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗಲಿದ್ದಾರೆ ಎಂದು ಪೆರಿಂಗಂಮ್ಮಾಲಾ ಅಜಿ ಹೇಳಿದ್ದಾರೆ.
Advertisement
#Kerala: Akhil Hindu Parishad protest march in Trivandrum demanding an ordinance in state assembly against Supreme Court verdict allowing women of all age groups to enter #SabarimalaTemple pic.twitter.com/nwediv97Qd
— ANI (@ANI) October 14, 2018
Advertisement
ಶಬರಿಮಲೆ ಮಹಿಳೆಯರ ಪ್ರವೇಶದ ವಿಚಾರವಾಗಿ ದೇಶದೆಲ್ಲೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇರಳದ ಸರ್ಕಾರ ಮತ್ತು ಇನ್ನಿತರ ಭಕ್ತರು ಈ ಆದೇಶದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಶಿವಸೇನಾ ಕಾರ್ಯಕರ್ತರಿಂದ ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.
Advertisement
ಕಳೆದ ಸೆಪ್ಟಂಬರ್ 28 ರಂದು ಕೇರಳದ ಶಬರಿಮಲೆಯ ಅಯ್ಯಪ್ಪನ ದೇವಸ್ಥಾನಕ್ಕೆ ಎಲ್ಲಾ ವಯೋಮಿತಿಯ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರಿಂ ಕೋರ್ಟ್‌ನ ಮಹತ್ವದ ತೀರ್ಪನ್ನು ನೀಡಿತ್ತು. ಭಕ್ತಿಯನ್ನು ಲಿಂಗದ ಆಧಾರದಲ್ಲಿ ವಿವರಿಸಲು ಸಾಧ್ಯವಿಲ್ಲ. ಧಾರ್ಮಿಕ ಹಕ್ಕಿಗೂ-ದೈಹಿಕ ಸ್ಥಿತಿಗತಿಗೂ ಸಂಬಂಧವೇ ಇಲ್ಲ. ಅಯ್ಯಪ್ಪನ ಭಕ್ತರು ಅನ್ಯಧರ್ಮದವರಂತೆ ಪ್ರತ್ಯೇಕ ಸ್ಥಾನಮಾನ ಹೊಂದಿಲ್ಲ. ಒಂದೆಡೆ ಮಹಿಳೆಯರನ್ನು ದೇವರಂತೆ ಪೂಜಿಸುತ್ತೇವೆ. ಮತ್ತೊಂದೆಡೆ ನಿಷೇಧ ಹೇರಲಾಗಿದೆ. ಮಹಿಳೆ ದೇವರಿಗೆ ಸಮಾನವಾಗಿದ್ದು ಮಹಿಳೆಯರಿಗೆ ಶಬರಿಮಲೆಗೆ ಬಹಿಷ್ಕಾರ ಸರಿಯಲ್ಲ. ಮಹಿಳೆಯರ ಬಗೆಗಿನ ಇಬ್ಬಗೆ ನೀತಿಯಿಂದ ಆಕೆಯ ಸ್ಥಾನಮಾನಕ್ಕೆ ಧಕ್ಕೆಯಾಗಿದೆ ಎಂದು ಕೋರ್ಟ್ ಹೇಳಿತ್ತು.
Tamil Nadu: Lord Ayyappa devotees take out a march in Chennai in protest against Supreme Court verdict over women's entry in #SabarimalaTemple. pic.twitter.com/zIQCOcqG1L
— ANI (@ANI) October 14, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv