ಮುಂಬೈ: ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್ ಗಡ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ದಿಟ್ಟ ನಿರ್ಧಾರದಿಂದಾಗಿ ಕಮಲ ಸೋಲು ಕಂಡಿದೆ ಎಂದು ಬಿಜೆಪಿಯ ಮಿತ್ರಪಕ್ಷ ಶಿವಸೇನೆ ವ್ಯಂಗ್ಯಮಾಡಿದೆ.
ನಿಷ್ಪ್ರಯೋಜಕ ಭರವಸೆಗಳನ್ನು ನಂಬಿಕೊಳ್ಳುವುದಕ್ಕಿಂತ, ನಮಗೆ ಪರ್ಯಾಯ ಮಾರ್ಗವಿದೆ ಎಂಬುದನ್ನು ಮತದಾರರು ಸಾಬೀತು ಮಾಡಿದ್ದಾರೆ. ಇಂದು ಮತದಾರರ ದಿಟ್ಟ ನಿರ್ಧಾರದಿಂದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಮತದಾರರ ಈ ಜಾಣ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳುವ ಮೂಲಕ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿ ಸೋಲಿಗೆ ಪರೋಕ್ಷವಾಗಿ ಸಂತೋಷ ವ್ಯಕ್ತಪಡಿಸಿದ್ದಾರೆ.
Advertisement
Advertisement
ಚುನಾವಣೆಯ ಮೂಲಕ ಮತದಾರರು ತಮಗೆ ಏನು ಬೇಕು ಮತ್ತು ಬೇಡ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಮತದಾರರು ಈ ಚುನಾವಣೆಯ ಮೂಲಕ ದೇಶಕ್ಕೆ ಹೊಸ ದಿಕ್ಸೂಚಿಯನ್ನು ನೀಡಿದ್ದಾರೆ. ಚುನಾವಣೆಯಲ್ಲಿ ಪ್ರಾಬಲ್ಯ ಮತ್ತು ಹಣ ಕೆಲಸ ಮಾಡಲ್ಲ ಎಂಬುದು ಇಲ್ಲಿ ಸಾಬೀತಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
Advertisement
ಕಾಂಗ್ರೆಸ್ ಅಧ್ಯಕ್ಷ ಏಕಾಂಗಿಯಾಗಿ ಹೋರಾಡಿ ಜಯವನ್ನು ತಮ್ಮದಾಗಿಸಿಕೊಂಡಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಆಡಳಿತರೂಢ ಬಿಜೆಪಿಗೆ ಸರಿಸಮಾನ ಫೈಟ್ ನೀಡಿತ್ತು. ಆದ್ರೆ ಅಂಕಿ ಅಂಶಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗುಜರಾತನಲ್ಲಿ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಚುನಾವಣೆ ಶೇಕಡಾವಾರು ಮತ ಹಂಚಿಕೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ ದೇಶದ ಜನರು ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರನ್ನು ತಿರಸ್ಕರಿಸುತ್ತಿದ್ದಾರೆ ಎಂಬುದು ಅರ್ಥವಾಗುತ್ತಿದೆ ಅಂದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv