ಬೈಕ್‌ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನಿಗೆ ಗುಂಡಿಕ್ಕಿ ಹತ್ಯೆ

Public TV
1 Min Read
shiv sena leader

ಚಂಡೀಗಢ: ಬೈಕ್‌ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ ಗಾಯಗೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ರಾತ್ರಿ ಶಿವಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ.

ರಾತ್ರಿ 10 ಗಂಟೆ ಸುಮಾರಿಗೆ ಮೂವರು ಅಪರಿಚಿತ ವ್ಯಕ್ತಿಗಳು ಶಿವಸೇನಾ ನಾಯಕನ ಮೇಲೆ ಗುಂಡು ಹಾರಿಸಿದರು. ಆದರೆ, ಮಂಗತ್‌ ಬದಲಿಗೆ 12 ವರ್ಷದ ಬಾಲಕನಿಗೆ ತಗುಲಿತು. ದಾಳಿಕೋರರು ಬೆನ್ನಟ್ಟಿದಾಗ ಮಂಗಾ ತಕ್ಷಣ ದ್ವಿಚಕ್ರ ವಾಹನದಲ್ಲಿ ಆ ಪ್ರದೇಶದಿಂದ ಪರಾರಿಯಾಗಲು ಯತ್ನಿಸಿದರು. ಬೆನ್ನಟ್ಟಿ ಮತ್ತೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ಗಾಯಗೊಂಡ ಬಾಲಕನನ್ನು ಆರಂಭದಲ್ಲಿ ಮೋಗಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಾ ಯಾವ ಶಿವಸೇನಾ ಬಣದ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article