ಮುಂಬೈ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಎಲ್ಲರನ್ನು ಒಟ್ಟಾಗಿ ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಅಭಿಪ್ರಾಯಪಟ್ಟರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ. ಚಂದ್ರಶೇಖರ್ ರಾವ್ ಅವರು ತುಂಬಾ ಕಷ್ಟಪಟ್ಟು ಕೆಲಸ ಮಾಡುವ ನಾಯಕರಾಗಿದ್ದಾರೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ಸಾಕಷ್ಟು ಹೋರಾಟಗಳನ್ನು ಎದುರಿಸಿದ್ದಾರೆ. ಅವರು ಎಲ್ಲವನ್ನೂ ಒಟ್ಟಾಗಿ ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ವಿಧ್ವಾಸ ವ್ಯಕ್ತಪಡಿಸಿದ ಅವರು, ಪ್ರಸ್ತುತ ನಡೆಯುತ್ತಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಲಿದೆ ಎಂದು ಭವಿಷ್ಯ ನುಡಿದರು.
Advertisement
Advertisement
ಭಾನುವಾರ ನಡೆದ ಸಭೆಯಲ್ಲಿ, ತೆಲಂಗಾಣ ರಾಷ್ಟ್ರ ಸಮಿತಿಯ ಮುಖ್ಯಸ್ಥರಾದ ಚಂದ್ರಶೇಖರ್ ರಾವ್ ಮತ್ತು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಅಭಿವೃದ್ಧಿ ಮತ್ತು ದೇಶದ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆಂದರು. ಇದನ್ನೂ ಓದಿ: ಈಶ್ವರಪ್ಪನಿಗೆ ದಿನಕ್ಕೊಮ್ಮೆ ನನ್ನ ಹೆಸ್ರು ಹೇಳದಿದ್ರೆ ನಿದ್ರೆ ಬರಲ್ಲ: ಡಿಕೆಶಿ
Advertisement
Advertisement
ಮುಂಬೈನಲ್ಲಿ ಚಂದ್ರಶೇಖರ್ ರಾವ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದ ನಂತರದಲ್ಲಿ ನಾನು ಹಾಗೂ ಠಾಕ್ರೆ ಅವರು ಚರ್ಚಿಸಿ, ಈ ಸಮಯದ ಬದಲಾವಣೆಯ ಅಗತ್ಯವಿದೆ ಎಂದು ನಾವು ಒಪ್ಪಿಕೊಂಡಿದ್ದೇವೆ ಎಂದರು. ಇದನ್ನೂ ಓದಿ: ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೊಡುವಂತೆ ಪಟ್ಟು ಹಿಡಿದ ವಿದ್ಯಾರ್ಥಿನಿಯರು!
ಟಿಆರ್‌ಎಸ್ ಮುಖ್ಯಸ್ಥರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಭಾನುವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದರು. ಶಿವಸೇನಾ ಸಂಸದ ಮತ್ತು ಪಕ್ಷದ ಮುಖ್ಯ ವಕ್ತಾರ ಸಂಜಯ್ ರಾವತ್ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದು, ಚಂದ್ರಶೇಖರ್ ರಾವ್ ಅವರು ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್‌ನೊಂದಿಗೆ ಅಧಿಕಾರವನ್ನು ಹಂಚಿಕೊಂಡಿರುವ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ.