ಮುಂಬೈ: ಬೆಳಗಾವಿ ವಿಚಾರದಲ್ಲಿ ಕರ್ನಾಟಕ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ನಡೆಗೆ ಶಿವಸೇನೆ ಕಿಡಿಕಾರಿದೆ.
ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಪ್ರಮುಖ್ಯತೆ ನೀಡಲು ಸರ್ಕಾರ ಬೆಳಗಾವಿಯನ್ನು 2ನೇ ರಾಜಧಾನಿ ಮಾಡುವ ಸೂಚನೆ ನೀಡಿತ್ತು. ಸಿಎಂ ಅವರ ನಡೆಗೆ ಶಿವಸೇನೆ ಆಕ್ಷೇಪ ವ್ಯಕ್ತಪಡಿಸಿದ್ದು ನ್ಯಾಯಾಂಗ ನಿಂದನೆ ಆರೋಪದಡಿ ನೋಟಿಸ್ ನೀಡಲು ಮಹಾರಾಷ್ಟ್ರ ಸರ್ಕಾರವನ್ನು ಆಗ್ರಹಿಸಿದೆ.
Advertisement
ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಗಡಿ ಸಮಸ್ಯೆ ಇದ್ದು, ಸಿಎಂ ಎಚ್‍ಡಿಕೆ ಹೇಳಿಕೆ ಮಹಾರಾಷ್ಟ್ರಕ್ಕೆ ಬೆಳಗಾವಿ ಸೇರಬೇಕೆಂದು ನಡೆಸುತ್ತಿರುವ ಹೋರಾಟಗಾರರ ಗಾಯದ ಮೇಲೆ ಉಪ್ಪು ಸವರಿದಂತಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿದೆ.
Advertisement
Advertisement
ಮತ್ತೊಮ್ಮೆ ಬೆಳಗಾವಿ ಬಾಂಬೆ ಕರ್ನಾಟಕದ ಒಂದು ಭಾಗ ಎಂದು ಶಿವಸೇನೆ ವಾದ ನಡೆಸಿದೆ. ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ಸಿಎಂ ಎಚ್‍ಡಿಕೆ ಹೇಗೆ 2ನೇ ರಾಜಧಾನಿ ಮಾಡುವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಪ್ರಶ್ನಿಸಿದೆ. ಅಲ್ಲದೇ ಮಹಾರಾಷ್ಟ್ರ ಸರ್ಕಾರ ಕೂಡಲೇ ನ್ಯಾಯಾಲಯಲ್ಲಿ ದೂರನ್ನು ದಾಖಲಿಸಬೇಕು ಎಂದು ಹೇಳಿದೆ.
Advertisement
ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಸಿಎಂ ಕುಮಾರಸ್ವಾಮಿಯವರು ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರಿಸಲಾಗುವುದು ಎಂದು ಜುಲೈ 31 ರಂದು ಹೇಳಿದ್ದರು.
ಭಾಷಾವಾರು ಪ್ರಾಂತ್ಯದ ಆಧಾರದಲ್ಲಿ ರಾಜ್ಯಗಳನ್ನು ರಚಿಸುವ ವೇಳೆ ವೇಳೆ ಹೆಚ್ಚಿನ ಜನರು ಮಾತನಾಡುವ ಭಾಷೆಯ ಆಧಾರದ ಮೇಲೆ ಬೆಳಗಾವಿಯನ್ನು ಕರ್ನಾಟಕಕ್ಕೆ ಸೇರಿಸಲಾಯಿತು. ಬಳಿಕ ಸರ್ಕಾರ ಉತ್ತರ ಕರ್ನಾಟಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಸುವರ್ಣಸೌಧವನ್ನು ಬೆಳಗಾವಿಯಲ್ಲಿ ನಿರ್ಮಾಣ ಮಾಡಿತ್ತು. ಪ್ರತಿ ವರ್ಷ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲಾಗುತ್ತದೆ.