ನವದೆಹಲಿ: ಉತ್ತರ ಪ್ರದೇಶದಲ್ಲಿ ಶಿವಸೇನೆ ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ ಎಂದು ರಾಜ್ಯಸಭಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಶಿವಸೇನೆ ಮೈತ್ರಿಕೂಟ ನಡೆಸುತ್ತ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ರಾಜ್ಯದಲ್ಲಿ ಬದಲಾವಣೆಯನ್ನು ಬಯಸುತ್ತೇವೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಂದಾಗಿ ಸಮಾಜವಾದಿ ಪಕ್ಷದೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಯುಪಿಯಲ್ಲಿ ನಮ್ಮ ಪಕ್ಷವು ಹಲವು ವರ್ಷಗಳಿಂದ ಕೆಲಸ ಮಾಡುತ್ತಿದೆ. ಆದರೆ ಬಿಜೆಪಿಯನ್ನು ನೋಯಿಸಲು ಬಯಸದ ಕಾರಣ ನಾವು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಳೆದ 24 ಗಂಟೆಯ ಅವಧಿಯಲ್ಲಿ ಯೋಗಿ ಸರ್ಕಾರದ ಎರಡು ಮಂತ್ರಿಗಳು ರಾಜೀನಾಮೆ
Advertisement
Advertisement
ಮಥುರಾಕ್ಕಾಗಿ ಯಾವುದೇ ಚಳುವಳಿ ನಡೆದರೆ ಶಿವಸೇನೆ ಭಾಗವಹಿಸಲು ಸಿದ್ಧವಾಗಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ 50-100 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಘೋಷಿಸಿದರು. ಉತ್ತರ ಪ್ರದೇಶದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ. ರಾಜ್ಯದಲ್ಲಿ ಬದಲಾವಣೆ ಖಂಡಿತಾ ಕಾಣುತ್ತೇವೆ ಎಂದರು.
Advertisement
Advertisement
ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಇತರ ಮೂವರು ಶಾಸಕರ ಯುಪಿ ಸರ್ಕಾರವನ್ನು ಬಿಟ್ಟು ಹೋಗಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಉತ್ತರ ಪ್ರದೇಶದಲ್ಲಿ ರಾಜಕೀಯ ಬದಲಾವಣೆಯತ್ತ ಸಾಗುತ್ತಿದೆ ಎಂದು ಸೂಚಿಸುತ್ತದೆ. ಆ ಪಕ್ಷ ತಮ್ಮ ಬಗ್ಗೆ ಏನೇ ಹೇಳಿಕೊಂಡರು ಆ ಪಕ್ಷದ ಸಚಿವರು ಮತ್ತು ಶಾಸಕರು ಆ ಪಕ್ಷವನ್ನು ಏಕೆ ಬಿಟ್ಟು ಹೋಗುತ್ತಿದ್ದಾರೆ. ಇದು ಏನನ್ನು ಸೂಚಿಸುತ್ತದೆ ಎಂದು ಪ್ರಶ್ನಿಸಿದ ಅವರು, ಏನೇ ಹೇಳಿದರು ವಾಸ್ತವವೇ ಬೇರೆ ಇದೆ ಎಂದು ತಿಳಿಸಿದರು.
ಸ್ವಾಮಿ ಪ್ರಸಾದ್ ಮೌರ್ಯ ಅವರು ರಾಜಕೀಯವನ್ನು ಬಹಳ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅವರು ಸೋಲಲಿರುವ ಪಕ್ಷದೊಂದಿಗೆ ಎಂದಿಗೂ ಉಳಿಯುವುದಿಲ್ಲ. ಅದನ್ನು ತಿಳಿದುಕೊಂಡವರು ಪಕ್ಷವನ್ನು ತೊರೆಯುತ್ತಿದ್ದಾರೆ. ಯುಪಿ ರಾಜಕೀಯ ಬದಲಾವಣೆಯತ್ತ ಸಾಗುತ್ತಿದೆ ಎಂದು ನಾನು ಭಾವಿಸುತ್ತೇನೆ ಎಂದರು. ಇದನ್ನೂ ಓದಿ: ಯೋಗಿ, ಬಿಜೆಪಿಗೆ ಬಿಗ್ ಶಾಕ್ – ಸಚಿವ ಸೇರಿ 4 ಶಾಸಕರು ರಾಜೀನಾಮೆ, ಇಂದು ಎಸ್‌ಪಿ ಸೇರ್ಪಡೆ
ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.