ಗದಗ: ಇಂದು ನಾಡಿನೆಲ್ಲಡೆ ಮಹಾ ಶಿವರಾತ್ರಿ (Shivaratri) ಸಂಭ್ರಮ. ಶಿವನ ಆರಾಧನೆ ದಿನವೇ ಯಾರೋ ದುಷ್ಕರ್ಮಿಗಳು ಶಿವ, ನಂದಿ ವಿಗ್ರಹ ಭಗ್ನಗೊಳಿಸಿದ ಘಟನೆ ಗದಗ ಜಿಲ್ಲೆಯ ಮುಂಡರಗಿ (Mundaragi) ತಾಲೂಕಿನ ಶಿಂಗಟಾಲೂರ ಬಳಿ ನಡೆದಿದೆ.
ಗ್ರಾಮದ ಹೊರವಲಯದ ಶ್ರೀ ರಾಮಲಿಂಗೇಶ್ವರ, ನಂದಿ ಮೂರ್ತಿ ಭಗ್ನಗೊಳಿಸಿದ್ದಾರೆ. ದೇವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು ಈ ದುಷ್ಕೃತ್ಯ ಮೆರೆದಿದ್ದಾರೆ. ಇದನ್ನೂ ಓದಿ: ಕೋಮುವಾದದಿಂದ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ: ಪ್ರಿಯಾಂಕ್ ಖರ್ಗೆ
ಮಹಾ ಶಿವರಾತ್ರಿ ಹಿನ್ನೆಲೆ ಗ್ರಾಮಸ್ಥರು ನಿನ್ನೆ ದೇವಸ್ಥಾನಕ್ಕೆ ಸುಣ್ಣ, ಬಣ್ಣ ಹಚ್ಚಿ ಬಂದಿದ್ದರು. ಬೆಳಿಗ್ಗೆ ಪೂಜೆಗೆ ತೆರಳಿದಾಗ ಮೂರ್ತಿ ಭಗ್ನವಾಗಿರುವ ವಿಷಯ ಬೆಳಕಿಗೆ ಬಂದಿದೆ. ರಾಮಲಿಂಗೇಶ್ವರ ಲಿಂಗದ ಪಾಣಿಬಟ್ಟಿಲು, ಎದುರಿನ ನಂದಿ ವಿಗ್ರಹದ ಮುಖ ಹಾಗೂ ದೇವಸ್ಥಾನದ ಹಿಂಭಾಗದಲ್ಲಿನ ಹೊನ್ನತ್ತೆಮ್ಮ ದೇವಿಯನ್ನೂ ವಿರೂಪಗೊಳಿಸಿದ್ದಾರೆ.
ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳಿಯರ ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಕೂಕೃತ್ಯಕ್ಕೆ ಕಾರಣರಾದ ಕಿಡಿಗೇಡಿಗಳನ್ನು ಬಂಧಿಸಿ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.

