ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ ಗಲಾಟೆ ಸೃಷ್ಟಿಸಿ, ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಸವರಾಜ್ ಬಂಧಿತ ಆರೋಪಿ. ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ನಮ್ಮ ಕರ್ನಾಟಕ ಸೇನೆಯ ಬಸವರಾಜ್ ಪಡುಕೋಟೆ ಹಾಗೂ ತಂಡದಿಂದ ಹಲ್ಲೆ ನಡೆದಿತ್ತು. ಫುಟ್‌ಪಾತ್ ತೆರವು ಮಾಡಿಸುತ್ತಿದ್ದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಲಾಗಿತ್ತು. ಒಟ್ಟು ಆರು ಜನರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು.
ಈವರೆಗೆ ಒಟ್ಟು ಹನ್ನೊಂದು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಂತರ ಎಸ್ಕೇಪ್ ಆಗಿದ್ದ ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆಯನ್ನು ಹುಡುಕಿ ಬಂಧಿಸಿದ್ದಾರೆ. ಎಲ್ಲಾ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.
