Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರಸೀಕೆರೆಯಲ್ಲಿ ಚುನಾವಣೆಗೆ ನಿಂತ್ಕೊಳಿ, ಜನ ಏನು ಅಂತ ತೋರಿಸ್ತಾರೆ: ಹೆಚ್‌.ಡಿ.ರೇವಣ್ಣಗೆ ಶಿವಲಿಂಗೇಗೌಡ ಸವಾಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan | ಅರಸೀಕೆರೆಯಲ್ಲಿ ಚುನಾವಣೆಗೆ ನಿಂತ್ಕೊಳಿ, ಜನ ಏನು ಅಂತ ತೋರಿಸ್ತಾರೆ: ಹೆಚ್‌.ಡಿ.ರೇವಣ್ಣಗೆ ಶಿವಲಿಂಗೇಗೌಡ ಸವಾಲ್‌

Hassan

ಅರಸೀಕೆರೆಯಲ್ಲಿ ಚುನಾವಣೆಗೆ ನಿಂತ್ಕೊಳಿ, ಜನ ಏನು ಅಂತ ತೋರಿಸ್ತಾರೆ: ಹೆಚ್‌.ಡಿ.ರೇವಣ್ಣಗೆ ಶಿವಲಿಂಗೇಗೌಡ ಸವಾಲ್‌

Public TV
Last updated: January 11, 2026 7:06 pm
Public TV
Share
3 Min Read
shivalinge gowda
SHARE

ಹಾಸನ: ಅರಸೀಕೆರೆಗೆ ಬಂದು ಚುನಾವಣೆಗೆ ನಿಂತ್ಕೊಳಿ, ಜನ ಏನು ಅಂತ ತೋರಿಸುತ್ತಾರೆ ಎಂದು ಹೆಚ್‌.ಡಿ.ರೇವಣ್ಣಗೆ (H.D.Revanna) ಶಾಸಕ ಶಿವಲಿಂಗೇಗೌಡ (Shivalinge Gowda) ಸವಾಲೆಸೆದಿದ್ದಾರೆ.

2028 ರ ವಿಧಾನಸಭಾ ಚುನಾವಣೆಯಲ್ಲಿ ಅರಸೀಕೆರೆ ಕ್ಷೇತ್ರದಿಂದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸ್ಪರ್ಧಿಸುವಂತೆ ಜೆಡಿಎಸ್ ಮುಖಂಡರ ಒತ್ತಾಯ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಂಥಾಹ್ವಾನ ನೀಡಿದ್ದಾರೆ.

ಅರಸೀಕೆರೆ (Arasikere) ಪಟ್ಟಣದಲ್ಲಿ ಭಕ್ತ ಕನಕದಾಸ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಆಚರಣ ಸಮಿತಿ ವತಿಯಿಂದ ದೇವರಾಜು ಅರಸು ಅವರ ದಾಖಲೆ ಮುರಿದ ಸಿಎಂ ಸಿದ್ದರಾಮಯ್ಯ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿ ಮಾತನಾಡಿದ ಶಿವಲಿಂಗೇಗೌಡ, ನಾಲ್ಕು ಬಾರಿ ಎಂಎಲ್‌ಎ ಆಗಿದ್ದೀನಿ. ನಮ್ಮ ಅಪ್ಪ ಹೆಬ್ಬೆಟ್ಟು, ನಮ್ಮ ಅಪ್ಪ ನೀಟಾಗಿ ಹೊಲದಲ್ಲಿ ಸಾಲು ಹೊಡೆಯುತ್ತಿದ್ದರು. ಅಂತಹವನ ಹೊಟ್ಟೆಯಲ್ಲಿ ಹುಟ್ಟಿದವನು ನಾನು, ಇತಿಹಾಸ ನನಗೂ ಗೊತ್ತಿದೆ, ಅಲ್ಲಿಂದ ಬೆಳೆದು ಬಂದವನು, ಐವತ್ತು ಜನ ಹಿಂದೆ ಕರೆದುಕೊಂಡು ಅರಸೀಕೆರೆಗೆ ಬಂದಿದ್ದೀರಾ, ಅರಸೀಕೆರೆಯಲ್ಲಿ ಇದು ನಡೆಯೋದಿಲ್ಲ.‌ ಅರಸೀಕೆರೆ ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳ ಪಟ್ಟಿ, ಪುಸ್ತಕ ಬಿಡುಗಡೆ ಮಾಡ್ತಿನಿ ಎಂದರು.

HD Revanna

ಅರಸೀಕೆರೆಗೆ ಇಂಜಿನಿಯರಿಂಗ್ ಕಾಲೇಜು ಮಂಜೂರು ಮಾಡಿಸಿಕೊಂಡು ಬಂದರೆ ಮಾರನೇ ದಿನ ಮೊಸಳೆಹೊಸಳ್ಳಿಗೆ ತೆಗೆದುಕೊಂಡು ಹೋದ್ರಿ. ಅಂದಿನ ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣಗೌಡರ ಬಳಿ ಮನವಿ ಮಾಡಿದಾಗ ಮಂಜೂರು ಮಾಡಿಕೊಟ್ಟರು. ಅರಸೀಕೆರೆಗೆ ಏನು ಮಾಡಿದ್ದೀರಿ? ಇಲ್ಲಿ ನಿಮ್ಮದು ನೆಲೆ ಎಲ್ಲಿದೆ? ಬನ್ನಿ ನಿಂತ್ಕೊಳಿ, ಅರಸೀಕೆರೆ ಜನ ತೋರಿಸುತ್ತಾರೆ. ಸುಮ್ಮಸುಮ್ಮನೆ ಭಾಷಣ ಮಾಡಬೇಡಿ, ಅರಸೀಕೆರೆ ನೆಮ್ಮದಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರಸೀಕೆರೆ ಪ್ರಗತಿಗಾಗಿ ಸಿದ್ದರಾಮಯ್ಯ, ಯಡಿಯೂರಪ್ಪ ಅವರ ಕಾಲಿಗೆ ಬಿದ್ದಿದ್ದೇನೆ. ನನಗೆ ಅನುದಾನ ಕೊಡುತ್ತಿದ್ದಾರೆ ಎಂದು ಅಸೂಯೆ ಪಡುತ್ತಿದ್ದರು. ನಾನೇ ಯಡಿಯೂರಪ್ಪ ಬಳಿ ಹೇಳಿ ಅವರಿಗೆ ಹತ್ತು ಕೋಟಿ ಕೊಡಿ ಎಂದು ಕೊಡಿಸಿದ್ದೇನೆ.‌ ನನಗೆ ಅವತ್ತಿನ ಕಾಲದಲ್ಲಿ ಟಿಕೆಟ್ ಕೊಟ್ರಿ, ಹದಿನಾಲ್ಕು ವೋಟಿನಲ್ಲಿ ಸೋತೆ. ನಾನು ಸೋತ ಮೇಲೆ ಅರಸೀಕೆರೆ ಕ್ಷೇತ್ರದಲ್ಲಿ ನಿಮ್ಮದು ಏನು ಇಲ್ಲ. ಅಲ್ಲಿಂದ ನಾನು ನನ್ನ ವೈಯುಕ್ತಿಕವಾಗಿ ಗೆದ್ದಿದ್ದೀನಿ.‌ ಜನ ಏಕೆ ನನ್ನ ಮೇಲೆ ವಿಶ್ವಾಸ ಇಟ್ಟರೋ ಗೊತ್ತಿಲ್ಲ ಎಂದರು.‌

ಎತ್ತಿನಹೊಳೆ ಯೋಜನೆ ನೀರು ಬಂದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದಿದ್ದೀರಿ. ಬನ್ನಿ ಮುಂದಿನ ಜೂನ್ ತಿಂಗಳಿಗೆ, ಕೆರೆಗಳು ತುಂಬುತ್ತವೆ. ನೀವು ಹೊಳೆನರಸೀಪುರವನ್ನೇ ನೋಡಿಕೊಂಡು ಕುಳಿತುಕೊಂಡರಿ. ಎಲ್ಲಾ ರಾಜಕೀಯ ನನಗೆ ಗೊತ್ತಿದೆ. ಎಲೆಕ್ಷನ್‌ಗೆ ಬನ್ನಿ, ಹೈಕಮಾಂಡ್ ಏಕೆ, ಬನ್ನಿ ನಿಂತ್ಕೊಳಿ, ಅರಸೀಕೆರೆ ಜನ ತೀರ್ಮಾನ ಮಾಡ್ತಾರೆ. ಈ ಕ್ಷೇತ್ರದ ಜನ ಪ್ರಬುದ್ಧರಾಗಿದ್ದಾರೆ. ರಾಜಕಾರಣ ಕಲಿತಿದ್ದಾರೆ. ಹಿಂದಿನ ರೀತಿ ವೋಟು ಹಾಕಲ್ಲ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಪಂಥಾಹ್ವಾನ ನೀಡಿದರು.

ನಾನು ಕಾಂಗ್ರೆಸ್‌ಗೆ ಕದ್ದುಮುಚ್ಚಿ ಹೋಗಿಲ್ಲ. ನೀವು, ಬರೀ ನಿಮ್ಮ ಮನೆ, ನಿಮ್ಮ ಮನೆತನ, ನೀವೇ ರಾಜಕೀಯ ಮಾಡಿಕೊಂಡು ಹೋದಿರಿ. ಹಾಸನ ಜಿಲ್ಲೆಯಲ್ಲಿ ಬೇರೆ ಯಾರು ಬೆಳೆಯೋದು ಬೇಡವೇ. ನಾನು ಬಂದು ಅರಸೀಕೆರೆ ಶಾಸಕನಾದಾಗ ಜೆಡಿಎಸ್ ಪಕ್ಷಕ್ಕೆ 85 ಸಾವಿರ ಮತಗಳನ್ನು ಹಾಕಿಸಿದ್ದೇನೆ. ನೀವು ಅರಸೀಕರೆಗೆ ಏನು ಮಾಡಿದ್ದೀರಿ ಎಂಬುದು ಜನರಿಗೆ ಗೊತ್ತಿದೆ. ಏನು ನಿಮ್ಮಿಂದ ಜೆಡಿಎಸ್‌ಗೆ ಮತಗಳು ಬಂದವಾ, ನನ್ನಿಂದ ನಿಮ್ಮ ಪಕ್ಷಕ್ಕೆ ಬಂದಿವೆ. ಪುಣ್ಯಾತ್ಮರೇ ನೀವು ಬಂದು ಇಲ್ಲಿ ಸಭೆ ಮಾಡಿ. ನನ್ನ ಹೆಸರು ಹೇಳಬೇಡಿ ನನಗೂ ಏನಾದರೂ ಆಗಿ ಬಿಡುತ್ತೆ. ಹಾಗಾಗಿ, ನನ್ನ ಹೆಸರು ಹೇಳಬೇಡಿ ಎಂದು ಟಾಂಗ್ ಕೊಟ್ಟರು.

ನಾವು ಹೆಂಡತಿ, ಮಕ್ಕಳು ಕಟ್ಕಂಡು ರಾಜಕಾರಣ ಮಾಡಲ್ಲ. ಅರಸೀಕೆರೆಯಲ್ಲಿ ಬದುಕುತ್ತೀನಿ, ಇಲ್ಲೇ ಸಾಯ್ತಿನಿ. ಈ ಜನುಮದಲ್ಲಿ ನಾನು ಇರುವವರೆಗೂ ನಿಮಗೆ ಇಲ್ಲಿ ಗೆಲ್ಲಲು ಸಾಧ್ಯವಿಲ್ಲ. ನಿಮಗೆ ಆಶೀರ್ವಾದ ಮಾಡುವ ಜಾಯಮಾನವೂ ನಮ್ಮದಲ್ಲ. ಈ ಅರಸೀಕೆರೆ ಕನಸಿನಲ್ಲಿ ಇಟ್ಟು ಕರೆದುಕೊಂಡು ಬಂದಿದ್ದೀರಲ್ಲಾ ಪುಣ್ಯಾತ್ಮರೇ, ನಾವು ಏನು ಅಂಥ ತೋರಿಸುತ್ತೇನೆ. ಒಕ್ಕಲಿಗರು ದೇವೇಗೌಡರನ್ನ ಬಿಟ್ಟು ಮತ ಹಾಕಲ್ಲ ಅಂತಿದ್ದರು, ನನಗೆ ಏಕೆ ಮತ ಹಾಕಿದ್ರು. ನೋಡೋಣ ಇದು ರಣರಂಗ, ಮಹಾಭಾರತ ಇವತ್ತೇ ಘೋಷಣೆ ಮಾಡಿದ್ದೀನಿ. ತಾಕತ್ ಇದ್ದರೆ ಬರಲಿ ಎಂದು ಚುನಾವಣೆಗೆ ಸ್ಪರ್ಧಿಸುವಂತೆ ಎಂದು ರೇವಣ್ಣಗೆ ಆಹ್ವಾನ ನೀಡಿದರು.

TAGGED:Arasikereh d revannaShivalinge Gowdaಅರಸೀಕೆರೆಶಿವಲಿಂಗೇಗೌಡಹೆಚ್‌.ಡಿ.ರೇವಣ್ಣ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Delhi Police
Latest

ಗ್ಯಾಸ್ ಸಿಲಿಂಡರ್ ಸಮಸ್ಯೆ – ದೆಹಲಿ ಪೊಲೀಸರ ರಜೆ ಕ್ಯಾನ್ಸಲ್

Public TV
By Public TV
8 minutes ago
Sonam Wangchuk
Latest

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಿಡುಗಡೆಗೆ ಕೇಂದ್ರ ನಿರ್ಧಾರ

Public TV
By Public TV
24 minutes ago
Siddaramaiah R Ashok
Bengaluru City

ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

Public TV
By Public TV
27 minutes ago
Iran arranges charter plane to repatriate crew of warship Iris Lavan docked in Kochi
Latest

ಇರಾನ್‌ ನಾವಿಕರ ಶವವನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್‌

Public TV
By Public TV
1 hour ago
Chikkamagaluru Funeral
Chikkamagaluru

ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
1 hour ago
Siddaramaiah 5
Districts

ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ ಸಿಎಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?