ಶಿವಮೊಗ್ಗ: ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಿಂದ (Shivamogga Airport) ವಿಮಾನಗಳ ಹಾರಾಟಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ( DGCA) ನೀಡಿದ್ದ ಅನುಮತಿ ಇನ್ನು 20 ದಿನದಲ್ಲಿ ಮುಕ್ತಾಯಗೊಳ್ಳಲಿದೆ. ಒಂದು ವರ್ಷಕ್ಕೆ ವಿಸ್ತರಿಸಬೇಕಿದ್ದ ಡಿಜಿಸಿಎ ಈ ಬಾರಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ಲೈಸೆನ್ಸ್ ವಿಸ್ತರಿಸಿದೆ. ಹೀಗಾಗಿ ವಿಮಾನ ಪ್ರಯಾಣಿಕರಿಗೆ ವಿಮಾನ ಹಾರಾಟ ನಡೆಸುತ್ತಾ ಅಥವಾ ಹಾರಾಟ ಸ್ಥಗಿತಗೊಳಿಸುತ್ತಾ ಎಂಬ ಪ್ರಶ್ನೆ ಎದ್ದಿದೆ.
ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಕಳೆದ ಬಾರಿ ಒಂದು ವರ್ಷದ ಅವಧಿಗೆ ಲೈಸೆನ್ಸ್ ನೀಡಿತ್ತು. ಈ ಅವಧಿ ಆಗಸ್ಟ್ 23ಕ್ಕೆ ಮುಕ್ತಾಯಗೊಂಡಿದೆ. ಲೈಸೆನ್ಸ್ ನವೀಕರಣದ ವೇಳೆ ಕೆಲವು ಕಾರಣ ನೀಡಿ ಲೈಸೆನ್ಸ್ ಅವಧಿಯನ್ನು ಕೇವಲ ಒಂದು ತಿಂಗಳಿಗೆ ವಿಸ್ತರಣೆ ಮಾಡಿದೆ. ಸೆ.23ಕ್ಕೆ ಈ ಅವಧಿ ಮುಗಿಯಲಿದೆ. ಈ ಲೈಸೆನ್ಸ್ ಅವಧಿ ನವೀಕರಣಗೊಳ್ಳದೆ ಇದ್ದರೆ ಶಿವಮೊಗ್ಗದಿಂದ ವಿಮಾನಗಳ ಹಾರಾಟಕ್ಕೆ ಸಮಸ್ಯೆಯಾಗಲಿದೆ. ಇದನ್ನೂ ಓದಿ: ಪಿಎಸ್‌ಐ ಪರೀಕ್ಷೆ ದಿನಾಂಕ ಮುಂದೂಡಿಕೆ ಇಲ್ಲ: ಕೆಇಎ
Advertisement
Advertisement
ರಾಜ್ಯ ಸರ್ಕಾರದ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮವು (KSIIDC) ಶಿವಮೊಗ್ಗ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿದೆ. ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಪರವಾನಗಿ ನೀಡುವಾಗ ಸುರಕ್ಷತೆ ಮತ್ತು ಭದ್ರತೆ ವಿಚಾರಗಳ ಬಗ್ಗೆ ಕೆಲವು ಷರತ್ತು ವಿಧಿಸಿತ್ತು. ಕೆಎಸ್‌ಐಐಡಿಸಿ ಸಂಸ್ಥೆಯು ಈ ಷರತ್ತುಗಳನ್ನು ಪೂರ್ತಿಯಾಗಿ ಪೂರೈಸಿಲ್ಲ. ಇದೇ ಕಾರಣಕ್ಕೆ ಈಗ ಡಿಜಿಸಿಎ ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್ ಅವಧಿಯನ್ನು ಕೇವಲ ಒಂದು ತಿಂಗಳಿಗೆ ಮಾತ್ರ ನವೀಕರಿಸಿದೆ. ಇದನ್ನೂ ಓದಿ: ಹಾವೇರಿ ನಗರಸಭೆ `ಬಿಜೆಪಿ’ ತೆಕ್ಕೆಗೆ – ಬಹುಮತವಿದ್ದರೂ ಕಾಂಗ್ರೆಸ್‌ಗೆ ಭಾರೀ ಮುಖಭಂಗ
Advertisement
ವಿಮಾನ ನಿಲ್ದಾಣದ ರನ್‌ವೇ ಸುರಕ್ಷತಾ ಪ್ರದೇಶವು ಮಾನದಂಡಕ್ಕೆ ಅನುಗುಣವಾಗಿಲ್ಲ. ರಕ್ಷಣಾ ಸಾಧನಗಳ ಖರೀದಿ ವಿಳಂಬವಾಗಿದೆ. ಫೈರ್ ಸೇಫ್ಟಿ ನೋಡಿಕೊಳ್ಳುವ ಸಿಬ್ಬಂದಿ ಕೊರತೆ ಇದೆ. ತ್ವರಿತ ಪ್ರತಿಕ್ರಿಯೆ ತಂಡ (ಕ್ಯೂಆರ್‌ಟಿ) ಇಲ್ಲ. ಭದ್ರತಾ ಸಿಬ್ಬಂದಿ ಸಂಖ್ಯೆ ಕಡಿಮೆ ಇದೆ. ಇವುಗಳನ್ನು ಪೂರೈಸಿದರೆ ಲೈಸೆನ್ಸ್ ನವೀಕರಣ ಮಾಡಲಾಗುವುದು ಎಂದು ಡಿಜಿಸಿಎ ತಿಳಿಸಿದೆ ಎಂದು ತಿಳಿದು ಬಂದಿದೆ.
Advertisement
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ (BY Raghavendra) ಕೆಲ ದಿನಗಳ ಹಿಂದೆ ಕೆಎಸ್‌ಐಐಡಿಸಿ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ಸಮಸ್ಯೆಗಳ ಕುರಿತು ಚರ್ಚಿಸಿದ್ದೇನೆ. ಅಗತ್ಯ ಸೌಲಭ್ಯ ಒದಗಿಸುವಂತೆ ಮನವಿ ಮಾಡಿದ್ದೇನೆ. ಕೆಎಸ್‌ಐಐಡಿಸಿ ಅಧಿಕಾರಿಗಳು ತಕ್ಷಣ ಈ ಸಮಸ್ಯೆಗಳನ್ನು ಪರಿಹರಿಸುವುದು ಸೂಕ್ತ ಎಂದು ತಿಳಿಸಿದರು.
ಒಟ್ಟಾರೆ ಮಧ್ಯ ಕರ್ನಾಟಕ ಭಾಗದ ಪ್ರಮುಖ ವಿಮಾನ ನಿಲ್ದಾಣವಾಗಿದೆ. ಈಗಾಗಲೇ ಶಿವಮೊಗ್ಗದಿಂದ ಬೆಂಗಳೂರು, ಗೋವಾ, ಹೈದರಾಬಾದ್ ಮತ್ತು ತಿರುಪತಿಗೆ ನಿತ್ಯ ವಿಮಾನಗಳು ಹಾರಾಟ ನಡೆಸುತ್ತಿವೆ. ಇಂಡಿಗೋ ಮತ್ತು ಸ್ಟಾರ್ ಏರ್‌ಲೈನ್ಸ್ ಸೇವೆ ನೀಡುತ್ತಿವೆ. ಸದ್ಯದಲ್ಲೇ ಸ್ಪೈಸ್ ಏರ್‌ಲೈನ್ಸ್ ಕೂಡ ವಿಮಾನಯಾನ ಆರಂಭಿಸುವ ಸಾಧ್ಯತೆ ಇದೆ.
ಶಿವಮೊಗ್ಗದ ನಗರದಿಂದ 10 ಕಿ.ಮೀ ದೂರದಲ್ಲಿರುವ ಸೋಗಾನೆ ಬಳಿ ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. 2023ರ ಫೆಬ್ರವರಿ 27 ರಂದು ಯಡಿಯೂರಪ್ಪ ಅವರ ಹುಟ್ಟು ಹಬ್ಬದ ದಿನದಂದೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿಲ್ದಾಣವನ್ನು ಉದ್ಘಾಟಿಸಿದ್ದರು.