ಎಣ್ಣೆ ಇಲ್ಲದೇ ಕುಡುಕರು ಕಂಗಾಲಾಗಿದ್ದಾರೆ: ಆಯನೂರು ಮಂಜುನಾಥ್

Public TV
1 Min Read
smg aynur manjunath

ಶಿವಮೊಗ್ಗ: ಕೊರೊನಾ ವೈರಸ್ ಭೀತಿ ಹಿನ್ನೆಲೆ ಭಾರತ 21 ದಿನಗಳ ಕಾಲ ಲಾಕ್‍ಡೌನ್ ಆಗಿದೆ. ಇದರ ಪರಿಣಾಮ ಮದ್ಯದ ಅಂಗಡಿಗಳು ಬಂದ್ ಆಗಿವೆ. ಆದರೆ ಎಣ್ಣೆಗೆ ದಾಸರಾಗಿರುವವರು ಎಣ್ಣೆ ಸಿಗದೇ ಕಂಗಾಲಾಗಿದ್ದು ಅವರ ಕಥೆ ಹೇಳತೀರದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕೊರೊನಾ ವೈರಸ್ ಕುರಿತು ಜಿಲ್ಲಾಡಳಿತ ಕೈಗೊಂಡಿರು ಮುಂಜಾಗ್ರತಾ ಕ್ರಮದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಆಯನೂರು ಮಂಜುನಾಥ್ ಅವರು, ಸಿ.ಎಲ್-2 ಅಂಗಡಿಗಳು ತೆರೆಯಲು ಸೂಚನೆ ಇದ್ದರೂ ಅವರು ತೆಗೆಯುತ್ತಿಲ್ಲ. ಇದರ ಪರಿಣಾಮ ಕುಡಿಯುವವರ ಮನೆಯಲ್ಲಿ ಸಮಸ್ಯೆಯಾಗಿದೆ ಎಂದು ಕೇಳಲ್ಪಟ್ಟಿದ್ದೇನೆ. ಎಣ್ಣೆ ಸಿಗದೇ ಪ್ರತಿದಿನ ಕುಡಿಯುವವರು ಹೇಗೇಗೋ ಆಡ್ತಿದ್ದಾರೆ ಎಂದು ಕುಡುಕರ ಸಮಸ್ಯೆ ಬಗ್ಗೆ ಮಾತನಾಡಿದರು.

liquor bottle

ಇದಕ್ಕೆ ಪ್ರತಿಕ್ರಿಯಿಸಿದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು, ವೈನ್ ಶಾಪ್‍ಗಳಿಗೆ ಸೀಲ್ ಮಾಡುವ ಮುನ್ನವೇ ಅಂಗಡಿಗಳಿಂದ ಮದ್ಯ ಹೊರಗೆ ಸಾಗಿಸಲಾಗಿದೆ ಎಂದು ಆರೋಪಿಸಿದರು. ಅಬಕಾರಿ ಇಲಾಖೆ ಅಧಿಕಾರಿಗಳು ಕೂಡ ಇದರಲ್ಲಿ ಶಾಮೀಲಾಗಿದ್ದು, ಅಂಗಡಿಗಳಿಂದ ಮದ್ಯವನ್ನು ಮನೆಗಳಿಗೆ ಹಾಗೂ ಇತರೆ ಅಂಗಡಿಗಳಿಗೆ ಸಾಗಿಸಿ, ಅಲ್ಲಿ ಮಾರಾಟ ಮಾಡಲಾಗುತ್ತಿದೆ. ಆದರೆ ಈ ಬಗ್ಗೆ ಅಬಕಾರಿ ಇಲಾಖೆ ಅಧಿಕಾರಿಗಳು ಗಮನವೇ ಹರಿಸುತ್ತಿಲ್ಲ. ಜನರು ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಸ್ಥಳಗಳಲ್ಲಿ ಗುಂಪು ಗುಂಪಾಗಿ ಸೇರುತ್ತಿದ್ದಾರೆ ಎಂದು ಕಿಡಿಕಾರಿದರು.

Share This Article
Leave a Comment

Leave a Reply

Your email address will not be published. Required fields are marked *