ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿಗೆ (Kashmir Pahalgam Terror Attack) ಬಲಿಯಾದ ಮಂಜುನಾಥ್ ರಾವ್ ಅವರ ಪಾರ್ಥೀವ ಶರೀರ ನಾಳೆ (ಏ.23) ಎಂದು ಬೆಳಗ್ಗೆ ಶಿವಮೊಗ್ಗ ನಗರಕ್ಕೆ ಆಗಮಿಸಿಲಿದೆ. ಹೀಗಾಗಿ ಅಂತ್ಯಸಂಸ್ಕಾರ ನೆರವೇರಿಸುವ ಹಿನ್ನೆಲೆ ಅರ್ಧದಿನ ಶಿವಮೊಗ್ಗ ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಾಸಕ ಎಸ್.ಎನ್ ಚನ್ನಬಸಪ್ಪ (SN Channabasappa) ತಿಳಿಸಿದರು.
ಗುಂಡಿನ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಅವರ ಮನೆ ಮುಂದೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುರುವಾರ ಬೆಳಗ್ಗೆ 9 ಗಂಟೆ ಹೊತ್ತಿಗೆ ಮೃತದೇಹ ನಗರಕ್ಕೆ ರಲಿದೆ. ಮಧ್ಯಾಹ್ನ 12.30ರ ವರೆಗೆ ಮನೆಯ ಬಳಿ ಅಂತಿಮ ವಿಧಿವಿಧಾನ ನೆರವೇರಲಿದ್ದು, ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಆ ಬಳಿಕ ನಗರದಲ್ಲಿ ಮೆರವಣಿಗೆ ನಡೆಯಲಿದ ಎಂದು ವಿವರಿಸಿದರು. ಇದನ್ನೂ ಓದಿ: ಸಾಲಾಗಿ ನಿಲ್ಲಿಸಿ ಹಿಂದೂನಾ ಅಂತ ಕೇಳಿ ಗುಂಡಿಟ್ಟು ಕೊಂದಿದ್ದಾರೆ – ಮೃತ ಭರತ್ ಭೂಷಣ್ ಸಂಬಂಧಿ
ಸಾಗರ ರಸ್ತೆ, ಐಬಿ ಸರ್ಕಲ್, ಕುವೆಂಪು ರಸ್ತೆ, ಜೈಲ್ ವೃತ್ತ, ನೆಹರೂ ರಸ್ತೆ, ಬಿ.ಹೆಚ್.ರಸ್ತೆ, ಶಂಕರಮಠ ಸರ್ಕಲ್‌ನಲ್ಲಿ ಮೆರವಣಿಗೆ ಮೂಲಕ ರೋಟರಿ ಚಿತಾಗಾರಕ್ಕೆ ತಲುಪಲಿದೆ. ಸೂರ್ಯ ಭಟ್ಟರ ಪುತ್ರ ಗುಂಡಾ ಭಟ್ಟರಿಂದ ಅಂತಿಮ ವಿಧಿವಿಧಾನ ನೆರವೇರಿಸಲಾಗುತ್ತದೆ. ಡಿಸಿ-ಎಸ್ಪಿ ಎಲ್ಲಾ ಸಿದ್ಧತೆ ಮಾಡಿದ್ದಾರೆ, ಯಾವುದೇ ಅಡ್ಡಿ ಆತಂಕ ಇಲ್ಲದೇ ಕಾರ್ಯಕ್ರಮ ನಡೆಯಬೇಕು. ಪ್ರಹ್ಲಾದ್ ಜೋಶಿ ಬರುತ್ತಾರೆ ಅಂತಿಮ ವಿಧಿವಿಧಾನಕ್ಕೆ ಬರುತ್ತಾರೆ ಅನ್ನೋ ಮಾಹಿತಿ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಮರು ದುರ್ಬಲರಾಗ್ತಿದ್ದಾರೆ ಅಂತ ಉಗ್ರರಿಗೆ ಅನ್ನಿಸಿದೆ – ಪಹಲ್ಗಾಮ್ ದಾಳಿಗೆ ಹಿಂದುತ್ವವೇ ಕಾರಣವಂತೆ: ರಾಬರ್ಟ್
ಇದೇ ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ಗರ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ರಾವ್ ಮೃತಪಟ್ಟಿದ್ದರು. ಇದನ್ನೂ ಓದಿ: Pahalgam Terror Attack | ಭಾರತ ಶೀಘ್ರದಲ್ಲೇ ಪ್ರತೀಕಾರ ತೀರಿಸಿಕೊಳ್ಳಲಿದೆ – ಉಗ್ರರಿಗೆ ರಾಜನಾಥ್ ಸಿಂಗ್ ಎಚ್ಚರಿಕೆ